
ಪ್ರಗತಿವಾಹಿನಿ ಸುದ್ದಿ: 2026-27ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದೆ.
ಕರ್ನಾಟಕದಲ್ಲಿ ಫೆಬ್ರವರಿ 27ರಿಂದ ಮಾರ್ಚ್ 18ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ಜರುಗಲಿವೆ. ಪರೀಕ್ಷೆ ವೇಳಾಪಟ್ಟಿ ಬಗ್ಗೆ ಇಲ್ಲಿದೆ ಮಾಹಿತಿ.
ದ್ವಿತೀಯ ಪಿಯುಸಿ ಪರೀಕ್ಷೆ 1ರ ವೇಳಾಪಟ್ಟಿ ಹೀಗಿದೆ
ಫೆ.27ರಂದು ಕನ್ನಡ ಮತ್ತು ಅರೇಬಿಕ್ ಪರೀಕ್ಷೆಯೊಂದಿಗೆ ಆರಂಭ
ಮಾ.1ರಂದು ಇಂಗ್ಲಿಷ್
ಮಾ.2ರಂದು ಪ್ರಾದೇಶಿಕ ಭಾಷೆಗಳ ಪರೀಕ್ಷೆ- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಮತ್ತು ಫ್ರೆಂಚ್
ಮಾ.3ರಂದು ಭೂಗೋಳ ಶಾಸ್ತ್ರ ಮತ್ತು ಮನಃಶಾಸ್ತ್ರ
ಮಾ.4ರಂದು ಸಮಾಜಶಾಸ್ತ್ರ ಮತ್ತು ಭೌತಶಾಸ್ತ್ರ
ಮಾ.5ರಂದು ಲೆಕ್ಕಶಾಸ್ತ್ರ
ಮಾ.6ರಂದು ಮಹಾಶಿವರಾತ್ರಿ ಹಿನ್ನೆಲೆ ರಜೆ (ಪರೀಕ್ಷೆ ಇಲ್ಲ)
ಮಾ.8ರಂದು ರಸಾಯನ ಶಾಸ್ತ್ರ, ಶಿಕ್ಷಣ ಶಾಸ್ತ್ರ ಮತ್ತು ಮೂಲ ಗಣಿತ
ಮಾ.9ರಂದು ಅರ್ಥಶಾಸ್ತ್ರ ಮತ್ತು ಭೂಗರ್ಭ ಶಾಸ್ತ್ರ
ಮಾ.10ರಂದು ರಂಜಾನ್ ಹಿನ್ನೆಲೆ ರಜೆ (ಪರೀಕ್ಷೆ ಇಲ್ಲ)
ಮಾ.11ರಂದು ಹಿಂದೂಸ್ತಾನಿ ಸಂಗೀತ ಹಾಗೂ ವೃತ್ತಿಪರ ವಿಷಯಗಳ ಪರೀಕ್ಷೆ
ಮಾ.12ರಂದು ವ್ಯವಹಾರ ಅಧ್ಯಯನ ಮತ್ತು ಗಣಿತ
ಮಾ.13ರಂದು ಐಚ್ಛಿಕ ಕನ್ನಡ, ತರ್ಕಶಾಸ್ತ್ರ ಮತ್ತು ಗೃಹವಿಜ್ಞಾನ
ಮಾ.15ರಂದು ರಾಜ್ಯಶಾಸ್ತ್ರ, ಜೀವಶಾಸ್ತ್ರ ಮತ್ತು ಗಣಕಶಾಸ್ತ್ರ
ಮಾ.16ರಂದು ಸಂಖ್ಯಾಶಾಸ್ತ್ರ ಮತ್ತು ವಿದ್ಯುನ್ಮಾನ ಶಾಸ್ತ್ರ
ಮಾ.17ರಂದು ಹಿಂದಿ
ಮಾರ್ಚ್ 18ರಂದು ಇತಿಹಾಸ ಪರೀಕ್ಷೆಯೊಂದಿಗೆ ಪರೀಕ್ಷೆ-1 ಮುಕ್ತಯಗೊಳ್ಳಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




