Kannada NewsKarnataka NewsLatest

*5,431 ಹುದ್ದೆಗಳಿಗೆ ಅರ್ಜಿ ಆಹ್ವಾನ*: *ನಾಳೆಯೇ ಅರ್ಜಿ ಸಲ್ಲಿಸಿ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್. ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಪ್ರಥಮ ದರ್ಜೆ ಸಹಾಯಕರು (FDA) ಹಾಗೂ ದ್ವೀತಿಯ ದರ್ಜೆ ಸಹಾಯಕರ (SDA) ಹುದ್ದೆಗಳ ನೇಮಕಾತಿಗೆ ಕೆಇಎ ಇಂದು ಅಧಿಸೂಚನೆ ಹೊರಡಿಸಿದೆ.

ನಾಳೆಯಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ.

ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ನ.26 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ. ಹಾಗಾಗಿ ಆಕಾಂಕ್ಷಿಗಳು ತಕ್ಷಣ ಅರ್ಜಿ ಸಲ್ಲಿಸಿ.

ಉಳಿಕ ಮೂಲ ವೃಂದಕ್ಕೆ ಸಂಬಂಧಿಸಿದಂತೆ 2,163 FDC ಹಾಗೂ 2,070 SDC ಹಾಗೂ‌ ಕಲ್ಯಾಣ ಕರ್ನಾಟಕ ವೃಂದದ 563 FDC ಹಾಗೂ 635 FDC ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳನ್ನ 2027ರ ಜನವರಿ 8, 9 , 10, 16 ಮತ್ತು 17ರಂದು ನಡೆಸುವುದಾಗಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ KEA ವೆಬ್ ಸೈಟ್‌ನಲ್ಲಿ ಪರಿಶೀಲಿಸಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌. ಪ್ರಸನ್ನ ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button