CrimeKannada NewsKarnataka News

*ಹೊತ್ತಿ ಉರಿದ ಮೊಬೈಲ್ ಅಂಗಡಿ*

ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೊಬೈಲ್ ಹಾಗೂ ಗೃಹೋಪಯೋಗಿ ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟ ಮಳಿಗೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ತುಮಕೂರು ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಮಂಜು ಅವರಿಗೆ ಸೇರಿದ ಮಂಜು ಕಮ್ಯುನಿಕೇಷನ್ಸ್ ಮಳಿಗೆಯಲ್ಲಿ ರಾತ್ರಿ ಸುಮಾರು 8 ಗಂಟೆ ವೇಳೆಗೆ ಏಕಾಏಕಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ನೋಡನೋಡುತ್ತಿದ್ದಂತೆಯೇ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಅಂಗಡಿಗೆ ವ್ಯಾಪಿಸಿದೆ.

ಬೆಂಕಿಯ ತೀವ್ರತೆಗೆ ಮಳಿಗೆಯಲ್ಲಿದ್ದ ಮೊಬೈಲ್ ಫೋನ್‌ಗಳು ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್ ಹಾಗೂ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button