Kannada NewsKarnataka NewsPolitics

*ಸ್ಟಿಂಗ್ ಆಪರೇಷನ್ ವಿವಾದಕ್ಕೆ ಬಿಗ್ ಟ್ವಿಸ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿವಾದ ಹೊಸ ತಿರುವು ಪಡೆದುಕೊಂಡಿದೆ.

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಸ್ಟಿಂಗ್ ಆಪರೆಷನ್ ಆರೋಪ ಕಟ್ಟುಕತೆ ಎಂದು ತಿಳಿಸಿದ್ದಾರೆ.

15 ದಿನಗಳಿಂದ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮಾಡಲಾಗಿದೆ ಎಂಬ ವಿಚಾರ ಇಟ್ಟುಕೊಂಡು ವ್ಯಾಪಕ ವಾಗ್ದಾಳಿ ನಡೆಸಿದ್ದರು. ಈ ವಿಚಾರ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ಪ್ರಕರಣದ ಕುರಿತು ಸರ್ಕಾರದ ವತಿಯಿಂದಲೂ ತನಿಖೆ ನಡೆಯುತ್ತಿತ್ತು. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿದ್ದ ಆರೋಪಗಳಿಗೆ ಕ್ಲೀನ್‌ಚಿಟ್ ಸಿಕ್ಕಿದೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸ್ಟಿಂಗ್ ಆಪರೇಷನ್ ಆರೋಪ ಕಟ್ಟುಕತೆ ಎಂಬ ಪ್ರಾಥಮಿಕ ತೀರ್ಮಾನಕ್ಕೆ ಬಂದಿರುವುದಾಗಿ ತಿಳಿಸಿದೆ.

ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ವೇದಿಕೆ ಸಿದ್ಧವಾದಂತಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button