*ಯಾವುದೇ ಅನುಮಾನವಿಲ್ಲ*: *ಸೌಜನ್ಯ ತಾಯಿ ಬಗ್ಗೆ ಸ್ಪಷ್ಟನೆ ನೀಡಿದ ಪೊಲೀಸ್ ಆಯುಕ್ತ*

ಪ್ರಗತಿವಾಹಿನಿ ಸುದ್ದಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಚುರುಕುಗೊಂಡಿರುವ ನಡುವೆಯೇ ಕುಸುಮಾವತಿ ಸೌಜನ್ಯ ತಾಯಿ ಹೌದೋ ಅಲ್ಲವೋ ಎಂಬ ಬಗ್ಗೆ ಅನುಮಾನವಿದೆ ಎಂದು ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇದೀಗ ಈ ಬಗ್ಗೆ ಸ್ವತಃ ಪೊಲೀಸ್ ಆಯುಕ್ತರೇ ಸ್ಪಷ್ಟನೆ ನೀಡಿದ್ದಾರೆ.
ಕುಸುಮಾವತಿ ಅವರು ಸೌಜನ್ಯಳ ತಾಯಿಯೇ ಅಲ್ಲವೇ ಎಂಬ ಬಗ್ಗೆ ನಮಗೆ ಯಾವುದೇ ರೀತಿಯ ಅನುಮಾನಗಳಿಲ್ಲ ಎಂದು ವಿಶೇಷ ತನಿಖಾ ತಂಡ(SIT) ತಂಡದ ಹಿರಿಯ ಅಧಿಕಾರಿ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಧರ್ಮಸ್ಥಳದ ಗ್ರಾಮಸ್ಥ ಕಿಶೋರ್ ಎಂಬುವವರು ಕುಸುಮಾವತಿ ಅವರು ಸೌಜನ್ಯಳ ನಿಜವಾದ ತಾಯಿಯೇ ಎಂಬ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಎಸ್‌ಐಟಿಗೆ ದೂರು ಸಲ್ಲಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಸುಧೀರ್ ಕುಮಾರ್ ರೆಡ್ಡಿ, ಸೌಜನ್ಯ ಮತ್ತು ಆಕೆಯ ತಾಯಿ ಕುಸುಮಾವತಿ ಅವರ ಸಂಬಂಧದ ವಿಚಾರದಲ್ಲಿ ತನಿಖಾ ತಂಡಕ್ಕೆ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದ್ದಾರೆ.
ಎಸ್‌ಐಟಿ ತನ್ನ ನಿಯೋಜಿತ ತನಿಖಾ ವ್ಯಾಪ್ತಿಯನ್ನು ಮೀರಿ ಹೋಗುವುದಿಲ್ಲ. ಮೂಲ ಪ್ರಕರಣಕ್ಕೆ ಸಂಬಂಧವಿಲ್ಲದ ಅಥವಾ ಅಪ್ರಸ್ತುತವಾದ ವಿಚಾರಗಳ ತನಿಖೆಗೆ ಕೈಹಾಕುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



