Kannada NewsLatestNational

*ಬದರಿನಾಥದಿಂದ ಬರುತ್ತಿದ್ದ ಹೆಲಿಕಾಪ್ಟರ್ ಪತನ: 6 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬದರಿನಾಥದಿಂದ ಫಾಟ್‌ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, 6 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬದರಿನಾಥ ಧಾಮ್ ದಿಂದ ಹೊರಟಿದ್ದ ಹೆಲಿಕಾಪ್ಟರ್ ಜೋಶಿಮಠದ ಬಳಿ ಪತನಗೊಂಡಿದೆ. ಜೋಶಿಮಠದ ‘ಹಾತಿ ಪಹಾಡ್’ ಹಿಂಭಾಗದಲ್ಲಿರುವ ಚಾಯಿ ಗ್ರಾಮದ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ.

ಹೆಲಿಕಾಪ್ಟರ್‌ನಲ್ಲಿದ್ದ ಕ್ಯಾ. ಹಿಮಾಂಶು ಜೊತೆ ಪ್ರಯಾಣಿಕರಾದ ಪ್ರತಾಪ, ಅರುಣ್‌, ಶಂಕರ್‌ ಗೌಡ, ಸುಧೀರ್‌, ಕೆ ಹೆಎಸ್‌ ನಟರಾಜ ಮೃತಪಟ್ಟಿದ್ದಾರೆ.

ಬದರಿನಾಥ ಮತ್ತು ಜೋಶಿಮಠ ನಡುವೆ ಹಾರಾಟ ನಡೆಸುತ್ತಿದ್ದ ವೇಳೆ ಏಕಾಏಕಿ ನಾಪತ್ತೆಯಾಗಿದ್ದು, ನಿಯಂತ್ರಣ ಕೊಠಡಿಯೊಂದಿಗಿನ ಸಂಪರ್ಕ ಕಡಿದುಕೊಂಡಿದೆ ಎಂದು ಚಮೋಲಿ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸ್ಥಳೀಯ ಆಡಳಿತ, ಪೊಲೀಸ್ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಚಾಯಿ ಗ್ರಾಮ ಹಾಗೂ ಹಾತಿ ಪಹಾಡ್ ಸುತ್ತಮುತ್ತಲಿನ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button