Kannada NewsKarnataka NewsLatest

*ತನ್ನ ಐಡಿ ಬೇರೆಯವರಿಗೆ ಕೊಟ್ಟು ಹಾಸನಾಂಬ ದೇವಸ್ಥಾನ ಪ್ರವೇಶಕ್ಕೆ ಅವಕಾಶ*: *SDA ಅಮಾನತು*

ಪ್ರಗತಿವಾಹಿನಿ ಸುದ್ದಿ: ಅನ್ಯ ವ್ಯಕ್ತಿಗಳಿಗೆ ತನ್ನ ಗುರುತಿನ ಚೀಟಿ ನೀಡಿ ಹಾಸನಾಂಬ ದೇವಸ್ಥಾನಕ್ಕೆ ಅನಧಿಕೃತವಾಗಿ ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ತಾಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.

ಉದಯ್‌ನಾಗರಾಜ್ ಅಮಾನತುಗೊಂಡ ನೌಕರ. ತಮ್ಮ ಗುರುತಿನ ಚೀಟಿಯನ್ನು ಬೇರೆಯವರಿಗೆ ನೀಡಿ, ಅನ್ಯ ವ್ಯಕ್ತಿಯೊಬ್ಬರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ಕಲ್ಪಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ತಹಶೀಲ್ದಾರ್ ನೀಡಿದ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅಮಾನತು ಆದೇಶ ಹೊರಡಿಸಿದ್ದಾರೆ. ಹಾಸನಾಂಬ ಮತ್ತು ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಕರ್ತವ್ಯದಲ್ಲಿ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ಇನ್ನೊಂದೆಡೆ, ಹಾಸನಾಂಬ ಜಾತ್ರೆಗೆ ಭಕ್ತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಭದ್ರತೆಯನ್ನು ಬಿಗಿಗೊಳಿಸಿದೆ. ಎಸ್‌ಪಿ ಶುಭನ್ವಿತಾ ಸ್ಥಳದಲ್ಲೇ ಮೊಕ್ಕಾಂ ಹೂಡಿ, ಧರ್ಮದರ್ಶನ ಹಾಗೂ 1,000 ರೂ. ಮತ್ತು 300 ರೂ. ವಿಶೇಷ ದರ್ಶನದ ಸಾಲುಗಳನ್ನು ಪರಿಶೀಲಿಸಿದ್ದಾರೆ.

ದೇವಸ್ಥಾನದಲ್ಲಿ ಯಾವುದೇ ನೂಕುನುಗ್ಗಲು ಉಂಟಾಗದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

Related Articles

Back to top button