Kannada NewsKarnataka NewsLatest

*ನದಿತಿರುವು ಯೋಜನೆ ವಿರೋಧಿಸಿ ಪತ್ರ ಚಳುವಳಿ ಪ್ರಾರಂಭಿಸಿದ ಪ್ರೌಢಶಾಲಾ ವಿದ್ಯಾರ್ಥಿಗಳು*

ಪ್ರಗತಿವಾಹಿನಿ ಸುದ್ದಿ: ನದಿ ತಿರುವು ಯೋಜನೆ ವಿರೋಧಿಸಿ ಶಿರಸಿ ತಾಲೂಕಿನ ಭೈರುಂಬೆ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸುಮಾರು 200ಕ್ಕೂ ಹೆಚ್ಚು ಪತ್ರಗಳನ್ನು ಅಂಚೆಯ ಮೂಲಕ ರವಾನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರಿಗೆ ಕನ್ನಡದಲ್ಲಿ ಪತ್ರಗಳನ್ನು ಕಳಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ನದಿ ತಿರುವು ಯೋಜನೆ ವಿರೋಧಿಸಿ ಪತ್ರ ಕಳಿಸಿದ್ದಾರೆ. ಇದಕ್ಕೆ ಭಾರತೀಯ ಕಿಸಾನ್ ಸಂಘ ಸಂಚಾಲಕ ನರಸಿಂಹಮೂರ್ತಿ ಸಹಕರಿಸಿದರು .

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಹೈಸ್ಕೂಲ್ ವಿದ್ಯಾರ್ಥಿಗಳು ಈ ಬಗೆಯ ನದಿ ತಿರುವು ಯೋಜನೆಯನ್ನು ವಿರೋಧಿಸಿ ಪತ್ರ ಚಳುವಳಿ ಮಾಡಬೇಕು ಎಂದು ಮನವಿ ಮಾಡಿದರು.

Related Articles

Back to top button