Belagavi NewsBelgaum NewsKannada NewsKarnataka News

*BREAKING: ಹಿಂಡಲಗಾ ಜೈಲಿಗೆ ಮುತ್ತಿಗೆ ಹಾಕಿದ ರೈತರು*

ಪ್ರಗತಿವಾಹಿನಿ ಸುದ್ದಿ: ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಡಲಗಾ ಬಳಿ ಬಿಗುವುನ ವಾತಾವಾರಣ ನಿರ್ಮಾಣವಾಗಿದೆ.

ಕಬ್ಬು ಬೆಳೆಗೆ ಸೂಕ್ತ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಹಾಗೂ ಕಾರ್ಖಾನೆಗಳಿಗೆ ನೀಡಿದ್ದ ಗಡುವು ಮುಗಿದಿದೆ. ಇದರಿಂದ ಆಕ್ರೋಶಗೊಂಡಿರುವ ರೈತರು, ಗುರ್ಲಾಪುರಿಂದ ಹಿಂಡಲಗಾ ಜೈಲು ಬಾರೋ ಚಳವಳಿ ಆರಂಭಿಸಿದ್ದಾರೆ.

ಇದರ ಮಧ್ಯೆ ಸಮೀಪ ಗ್ರಾಮದ ರೈತರು ಹಿಂಡಲಗಾ ಜೈಲಿಗೆ ಮುತ್ತಿಗೆ ಹಾಕಿದ್ದಾರೆ. ರೈತರನ್ನ ತಡೆಯಲು ಪೊಲೀಸರು ಯತ್ನಿಸಿದ್ದು, ಈ ವೇಳೆ ರೈತರು ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದೆ. ಹಿಂಡಲಗಾ ಜೈಲಿನ ಬಳಿ ಹೈಡ್ರಾಮಾ ನಡೆದಿದೆ. ರೈತರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.


Related Articles

Back to top button