CrimeKarnataka NewsLatest

*ಸ್ಕೂಟರ್ ಗೆ ಬಸ್ ಡಿಕ್ಕಿ*: *ಭೀಕರ ಅಪಘಾತದಲ್ಲಿ ಪಿಯು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಸ್ಕೂಟರ್‌ಗೆ ಬಸ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

17 ವರ್ಷದ ವೈಷ್ಣವಿ ಮೃತ ವಿದ್ಯಾರ್ಥಿನಿ. ಟ್ಯೂಷನ್ ಮುಗಿಸಿಕೊಂಡು ತಂದೆಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಗಳು ಸ್ಥಳದಲ್ಲೆ ಸಾವನ್ನಪ್ಪಿದ್ದರೆ, ತಂದೆ ಗಂಭೀರವಾಅಗಿ ಗಾಯಗೊಂಡಿದ್ದಾರೆ.

ಮೈಸೂರು ಅರಮನೆಯ ಸನಿಹದ ಚಾಮರಾಜ ವೃತ್ತದ ಬಳಿ ಈ ಅಪಘಾತ ಸಂಭವಿಸಿದೆ. ಮೈಸೂರಿನ ಎನ್‌ಆರ್ ಮೊಹಲ್ಲಾ ನಿವಾಸಿ ವೆಂಕಟೇಶ್ ಮತ್ತು ಜ್ಯೋತಿ ದಂಪತಿ ಪುತ್ರಿ ವೈಷ್ಣವಿ ಮೃತ ದುರ್ದೈವಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related Articles

Back to top button