Belagavi NewsBelgaum NewsKannada NewsKarnataka NewsNational
*ಬೆಳಗಾವಿಯಲ್ಲಿ ನ. 6ರಂದು ಖಾಸಗಿ ಕಂಪನಿಗಳಿಂದ ನೇರ ಸಂದರ್ಶನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸಹಯೋಗ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 6ರಂದು ಖಾಸಗಿ ಕಂಪನಿಗಳಿಂದ ನೇರ ಸಂದರ್ಶನ ಆಯೋಜಿಸಲಾಗಿದೆ.
ಸಮಾದೇವಿ ಗಲ್ಲಿಯಲ್ಲಿರುವ ಸಹಯೋಗ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಸಂದರ್ಶನ ನಡೆಯಲಿದೆ.
ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ಉದ್ಯೋಗಾವಕಾಶ ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳಿಗೆ ಇತರೆ ಯಾವುದೇ ಸೌಲಭ್ಯಗಳನ್ನು ಒದಗಿಸಲಾಗುವುದಿಲ್ಲ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9113567979, 7829007185 ಅಥವಾ 7899683036 ಸಂಖ್ಯೆಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


