Kannada NewsKarnataka NewsLatestPolitics

*ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್*: *ತುಟ್ಟಿಭತ್ಯೆ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವ ಮೂಲಕ ದೀಪಾವಳಿ ಹಬ್ಬಕ್ಕೆ ಗಿಫ್ಟ್ ನೀಡಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಶೇ. 2.5ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನುಮೋದನೆ ನೀಡಿದೆ ಎಂದು ತಿಳಿದುಬಂದಿದೆ. ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಶೇ. 2.5ರಷ್ಟು ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ.
2026ರ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದ್ದು, ಇದರಿಂದ ರಾಜ್ಯದ ಸರ್ಕಾರಿ ನೌಕರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿರುವ ಪ್ರಕಟಣೆಯ ಪ್ರಕಾರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಹೆಚ್ಚಳಕ್ಕೆ ಅನುಮೋದನೆ ನೀಡಿದ್ದು, ಅಧಿಕೃತ ಆದೇಶವನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಪರವಾಗಿ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ಸರ್ಕಾರದ ನಿರ್ಧಾರಕ್ಕೆ ಧನ್ಯವಾದ ತಿಳಿಸಿದ್ದಾರೆ.


Related Articles

Back to top button