
ಪ್ರಗತಿವಾಹಿನಿ ಸುದ್ದಿ: ಹಾಸನ ಅಧಿದೇವತೆ ಹಾಸನಾಂಬೆ ದರ್ಶನೋತ್ಸವ ನಡೆಯುತ್ತಿದ್ದು, ರಾಜ್ಯ, ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಪ್ರತಿ ದಿನ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಆಗಮಿಸಿ ಹಾಸನಾಂಬೆ ತಾಯಿ ದರ್ಶನ ಪಡೆಯುತ್ತಿದ್ದಾರೆ. ಈ ನಡುವೆ ಹಾಸನಾಂಬೆ ದರ್ಶನಕ್ಕೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ.
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬಾ ತಾಯಿ ದರ್ಶನೋತ್ಸವ ನಡೆಯುತ್ತಿದ್ದು, ಅಕ್ಟೋಬರ್ 30 ರಿಂದ ಆರಂಭವಾಗಿದ್ದು, ನವೆಂಬರ್ 10ರವರೆಗೆ ನಡೆಯಲಿದೆ. ಈ ನಡುವೆ ಇಂದು ರಾತ್ರಿಯಿಂದ ನಾಳೆ ಬೆಳಿಗ್ಗೆವರೆಗೆ ದರ್ಶನವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ದೇವರಿಗೆ ನೈವೇದ್ಯ, ಅಲಂಕಾರ ಬದಲಾವಣೆ ಹಿನ್ನೆಲೆ ಇಂದು ರಾತ್ರಿ 12ಗಂರಿಂದ ನಾಳೆ ಬೆಳಗ್ಗೆ 6ರವರೆಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಹೀಗಾಗಿ ಭಕ್ತರು ರಾತ್ರಿಯಿಡಿ ಸಾಲಿನಲ್ಲಿ ನಿಂತು ಕಾಯದಂತೆ ಹಾಸನಾಂಬೆ ದೇವಾಲಯ ಆಡಳಿತ ಮಂಡಳಿ ಮನವಿ ಮಾಡಿದೆ.




