Belagavi NewsBelgaum NewsLatestPolitics

*ಹಾಲು, ಬಸ್‌ ದರ ಏರಿಕೆ*: *ಡಾ.ಸೋನಾಲಿ ಸರ್ನೊಬತ್‌ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬರದಿಂದ ತತ್ತರಿಸುತ್ತಿರುವ ರಾಜ್ಯದ ಜನರ ಮೇಲೆ ಹಾಲಿನ ದರ ಹಾಗೂ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಮೂಲಕ ಕಾಂಗ್ರೆಸ್‌ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ ಎಂದು ರಾಜ್ಯ ಬಿಜೆಪಿ ಮಹಿಳಾಮೋರ್ಚಾ ಕಾರ್ಯದರ್ಶಿ ಡಾ. ಸೋನಾಲಿ ಸರ್ನೊಬತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ ಸರ್ಕಾರಕ್ಕೆ ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಈಗಾಗಲೇ ಬೆಲೆ ಏರಿಕೆ ಹಾಗೂ ಬರದ ಸಂಕಷ್ಟದಿಂದ ಬಳಲುತ್ತಿರುವ ಜನರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.

ರೈತರ ಹಿತದ ಹೆಸರಿನಲ್ಲಿ ಹಾಲಿನ ದರ ಏರಿಕೆ ಮಾಡಿರುವ ಸರ್ಕಾರ, ಹೆಚ್ಚುವರಿ ಹಣದಲ್ಲಿ ರೈತರಿಗೆ ಎಷ್ಟು ನೀಡುತ್ತಿದೆ? ಉಳಿದ ಹಣವನ್ನು ಏನು ಮಾಡುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಶಕ್ತಿ ಯೋಜನೆಯ ಗ್ಯಾರಂಟಿಯ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿ, ಈಗ ಬಸ್‌ ಪ್ರಯಾಣ ದರ ಏರಿಸಿರುವುದು ಎಷ್ಟು ಸರಿ ಎಂದು ಅವರು ಆಕ್ಷೇಪಿಸಿದ್ದಾರೆ. ಜನರಿಗೆ ಅನುಕೂಲ ಕಲ್ಪಿಸುವ ಭರವಸೆ ನೀಡಿದ್ದ ಸರ್ಕಾರ, ದರ ಏರಿಕೆಯ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಒಬ್ಬ ಮಹಿಳಾ ಸಚಿವರೂ ಇಲ್ಲದಿರುವುದು ಕಾಂಗ್ರೆಸ್‌ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ ಎಂದು ಡಾ. ಸೋನಾಲಿ ಸರ್ನೊಬತ್‌ ಟೀಕಿಸಿದ್ದಾರೆ. ಮಹಿಳೆಯರು, ಬಡವರು ಹಾಗೂ ರೈತರ ಹಿತದ ಬಗ್ಗೆ ಮಾತನಾಡುವ ಸರ್ಕಾರ, ಅವರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಅವರು ದೂರಿದ್ದಾರೆ.

Related Articles

Back to top button