Belagavi NewsBelgaum NewsCrimeKannada NewsKarnataka NewsNational

*ಬೆಳಗಾವಿಯಲ್ಲಿ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಕಾರ್ಯಾಚರಣೆ: ಹರಿತವಾದ ಕೊಯ್ತಾ ಸಮೇತ ವ್ಯಕ್ತಿ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಉದ್ದೇಶದಿಂದ ಕಾರ್ಯಾಚರಣೆ ನಡೆಸಿದ ಮಾರ್ಕೆಟ್ ಪೊಲೀಸ್ ಠಾಣೆಯ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಪೊಲೀಸರು, ಹರಿತವಾದ ಕೊಯ್ತಾ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ನವೆಂಬರ್ 6ರಂದು ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಕಾನೂನುಬಾಹಿರವಾಗಿ ಮಾರಕ ಆಯುಧವನ್ನು ಹೊಂದಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ಅಬಿಷೇಕ್ ವಿನೋದ್ ಕೆಂಕರೆ (43) ಎಂದು ಗುರುತಿಸಲಾಗಿದೆ. ಈತ ತನ್ನ ಬಳಿ ಹರಿತವಾದ ಕೊಯ್ತಾವನ್ನು ಯಾವುದೇ ಅಪರಾಧ ಕೃತ್ಯ ಎಸಗುವ ಉದ್ದೇಶದಿಂದ ಇಟ್ಟುಕೊಂಡಿದ್ದ ಎನ್ನಲಾಗಿದೆ.

ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 236/2026ರ ಅಡಿಯಲ್ಲಿ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 27(1) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 97ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

Related Articles

Back to top button