Belagavi NewsBelgaum NewsKannada NewsKarnataka News

*ತುಳಜಾಪುರದಿಂದ ಮರಳುತ್ತಿದ್ದಾಗ ಭೀಕರ ಅಪಘಾತ: ನಾಲ್ವರು ಯುವಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ತುಳಜಾಪುರದ ಭವಾನಿ ದೇವಿ ದರ್ಶನ ಮುಗಿಸಿಕೊಂಡು ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯಾದಗಿರಿ ಜಿಲ್ಲೆಯ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂಪುರ ಸಮೀಪದ ಸೂರತ್‌–ಚೆನ್ನೈ ಎಕ್ಸ್‌ಪ್ರೆಸ್‌ ಹೈವೇನಲ್ಲಿ ಈ ದುರಂತ ಸಂಭವಿಸಿದೆ. ಯುವಕರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದಲ್ಲಿದ್ದ ಸೇತುವೆಗೆ ವೇಗವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗುರುರಾಜ್ ಸುರೇಶ ಚವ್ಹಾಣ (29), ರೆಡ್ಡಿ ಬಾಮ್ಲಾ ರಾಠೋಡ (33), ಗೋವಿಂದ ಸೀತ್ಯಾ ಚವ್ಹಾಣ (28) ಹಾಗೂ ಕುಮಾರ ರಾಮು ರಾಠೋಡ (26) ಮೃತಪಟ್ಟಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಸುಕಿನ ಜಾವ ಅವರು ಕೂಡ ಕೊನೆಯುಸಿರೆಳೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Back to top button