
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ಮಳೆಯ ಅಬ್ಬರ ಕಡಿಮೆಯಾಗಿದ್ದು, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಆದರೆ ಕೆಲವೆಡೆ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳ ಕೆಲವು ಪ್ರದೇಶಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗುವ ಸಾಧ್ಯತೆಯಿದೆ.
ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಒಟ್ಟಿನಲ್ಲಿ ರಾಜ್ಯದಲ್ಲಿ ಮಳೆಯ ತೀವ್ರತೆ ತಗ್ಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.




