Kannada NewsKarnataka NewsLatestPolitics

*ಡಿಕೆಶಿ ಪೂಜೆ ವೇಳೆ ಎಲ್‌ಇಡಿ ಪರದೆಗೆ ಚಪ್ಪಲಿ ಎಸೆದು ಭಕ್ತರ ಆಕ್ರೋಶ*: *ವಿಡಿಯೋ ವೈರಲ್*

ಪ್ರಗತಿವಾಹಿನಿ ಸುದ್ದಿ: ಹಾಸನಾಂಬೆ ದರ್ಶನಕ್ಕೆ ಬಂದಿದ್ದ ಭಕ್ತರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಇದರಿಂದ ಸಾಮಾನ್ಯ ಭಕ್ತರ ದರ್ಶನಕ್ಕೆ ವಿಳಂಬವಾಯಿತು ಎಂಬ ಆಕ್ರೋಶ ವ್ಯಕ್ತವಾಗಿದೆ. ಡಿಕೆಶಿ ಗರ್ಭಗುಡಿಯಲ್ಲಿ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಪ್ರಸಾರವಾಗುತ್ತಿದ್ದ ಎಲ್‌ಇಡಿ ಪರದೆಗೆ ಕೆಲ ಭಕ್ತರು ಚಪ್ಪಲಿ ಎಸೆದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಸನಾಂಬೆಯ ದರ್ಶನಕ್ಕಾಗಿ ಆಗಮಿಸಿದ್ದರು. ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದ ಭಕ್ತರಿಗೆ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತ ಭೇಟಿ ನೀಡಿದ್ದ ಕಾರಣದಿಂದ ದರ್ಶನ ಮತ್ತಷ್ಟು ವಿಳಂಬವಾಗಿದೆ. ಇದರಿಂದ ಅಸಮಾಧಾನಗೊಂಡ ಕೆಲವರು ಘೋಷಣೆಗಳನ್ನು ಕೂಗಿದ್ದಾರೆ. ಬಳಿಕ ಎಲ್‌ಇಡಿ ಪರದೆಯತ್ತ ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಕಳೆದ ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೇವಿಯ ದರ್ಶನ ಪಡೆದಿದ್ದರು. ಇದೀಗ ಡಿ.ಕೆ. ಶಿವಕುಮಾರ್ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಭಕ್ತರ ಆಕ್ರೋಶದ ಘಟನೆ ನಡೆದಿದೆ.

Related Articles

Back to top button