Kannada NewsKarnataka NewsLatestPolitics

*ಸಿದ್ದರಾಮಯ್ಯ ಭೇಟಿ ಹಿಂದಿನ ಅಸಲಿ ಉದ್ದೇಶ ಬಿಚ್ಚಿಟ್ಟ ಡಿಕೆಶಿ*: *ಮುನಿಸಿನ ಚರ್ಚೆಗೆ ತೆರೆ?*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಅಥವಾ ಮುನಿಸು ಇಲ್ಲ. ಕೆಲವರು ನಮ್ಮ ನಡುವೆ ಮುನಿಸು ಇದೆ ಎಂಬ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಯಾವಾಗಲು ಅವರೇ ನಮ್ಮ ನಾಯಕರು ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ರಾಜಕಾರಣದಲ್ಲಿ ನಿಂದಕರು ಮತ್ತು ವಿರೋಧಿಗಳು ಇರಬೇಕು. ಅವರೆಲ್ಲ ಇದ್ದಾಗಲೇ ನಮ್ಮಂತಹವರು ಶುದ್ಧ ರಾಜಕಾರಣ ಮಾಡಲು ಸಾಧ್ಯ. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಕೆಲವರು ಮಾಧ್ಯಮಗಳಲ್ಲಿ ವಿಭಿನ್ನ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ಈ ವಿಚಾರವಾಗಿ ನಾವು ಅವರಿಗೆ ತಿಳಿಸಬೇಕಾದ ವಿಷಯಗಳನ್ನು ಈಗಾಗಲೇ ತಿಳಿಸಿದ್ದೇವೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅವರೊಂದಿಗೆ ಚರ್ಚಿಸಬೇಕಾದ ಹಲವು ವಿಚಾರಗಳಿವೆ. ಹೀಗಾಗಿ ಅವರನ್ನು ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಒಟ್ಟಿನಲ್ಲಿ, ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ರಾಜಕೀಯ ಚರ್ಚೆಗಳ ನಡುವೆಯೇ ಡಿಕೆಶಿ ನೀಡಿರುವ ಈ ಹೇಳಿಕೆ ಕುತೂಹಲ ಮೂಡಿಸಿದೆ.

Related Articles

Back to top button