
ಪ್ರಗತಿವಾಹಿನಿ ಸುದ್ದಿ: ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚೊಕ್ಕರೆಡ್ಡಿಹಳ್ಳಿ ಸಮೀಪ ನಡೆದಿದೆ.
ಬಸ್, ಬೈಕ್, ಬೊಲೆರೊ ಹಾಗೂ ಆಟೋ ನಡುವೆ ಸರಣಿ ಡಿಕ್ಕಿ ಸಂಭವಿಸಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಚಿಂತಾಮಣಿ ತಾಲೂಕಿನ ಬ್ರಾಹ್ಮಣರಹಳ್ಳಿ ನಿವಾಸಿಗಳಾದ ಶ್ರೀನಿವಾಸ್ (50), ನರಸಮ್ಮ (50) ಮತ್ತು ರಾಮಾಂಜಿನಮ್ಮ (45) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ವೆಂಕಟೇಶ್, ಪ್ರೀತಿ ಮತ್ತು ಪ್ರಿಯಾಂಕಾ ಸೇರಿದಂತೆ ಐವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಚಿಂತಾಮಣಿ ಡಿವೈಎಸ್ಪಿ ರಘು ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.



