Kannada NewsKarnataka NewsLatestNationalTravel

*ಏಕಾಏಕಿ ಹಳಿತಪ್ಪಿದ ಆರು ಬೋಗಿಗಳು*: *ಹಲವು ಪ್ರಯಾಣಿಕರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಬೆಳಗಿನ ಜಾವ ರೈಲು ಸಂಚಾರದ ವೇಳೆ ಭೀಕರ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ರೈಲಿನ ಬೋಗಿಗಳು ಏಕಾಏಕಿ ಹಳಿಯಿಂದ ಕೆಳಗಿಳಿದಿದ್ದು, ಏಕಾ ಏಕಿ ನಡೆದ ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕ ಮನೆಮಾಡಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.

ಕೋಲ್ಕತ್ತಾದಿಂದ ಮಿಜೋರಾಂನ ಸೈರಂಗ್‌ಗೆ ತೆರಳುತ್ತಿದ್ದ ಕೋಲ್ಕತ್ತಾ-ಸೈರಂಗ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಘಟನೆ ಸಂಭವಿಸಿದೆ. ಬೆಳಗಿನ ಜಾವ ರೈಲು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಹಳಿ ತಪ್ಪಿದ ಪರಿಣಾಮ ಇಂಜಿನ್ ಸೇರಿದಂತೆ ಆರು ಬೋಗಿಗಳು ಹಳಿಯಿಂದ ಹೊರಕ್ಕೆ ಜಾರಿವೆ. ಅಪಘಾತದ ತೀವ್ರತೆಗೆ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ರೈಲ್ವೆ ಇಲಾಖೆಯ ಅಧಿಕಾರಿಗಳು, ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೋಗಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆಯುವ ಕಾರ್ಯವೂ ಮುಂದುವರಿದಿದೆ.

ಅಪಘಾತದಿಂದಾಗಿ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಹಳಿಗಳ ದುರಸ್ತಿ ಹಾಗೂ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.

Related Articles

Back to top button