EducationKannada NewsKarnataka NewsLatest

*ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ಇಂಜಿನಿಯರಿಂಗ್ ಓದಬೇಕೆಂಬ ಹಂಬಲವಿದ್ದರೂ ಆರ್ಥಿಕ ಸಮಸ್ಯೆಯಿಂದಾಗಿ ಓದಿಗೆ ಅಡ್ಡಿಯಾಗುತ್ತಿದೆಯೇ? ಹಾಗಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಇಲ್ಲೊಂದು ಅದ್ಭುತ ಸ್ಕಾಲರ್ ಶಿಪ್ ಅವಕಾಶವಿದೆ.

ಹೌದು. ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಅಮೆಜಾನ್ ನೀಡುತ್ತಿರುವ ಸ್ಕಾಲರ್ ಶಿಪ್ ಅವಕಾಶ ನಿಮ್ಮ ಕನಸು ಸಾಕಾರಗೊಳಿಸಿಕೊಳ್ಳಲು ನೆರವಾಗಲಿದೆ.

ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅಮೆಜಾನ್ ಇಂಡಿಯಾ ಬರೋಬ್ಬರಿ ₹2 ಲಕ್ಷ ಸ್ಕಾಲರ್‌ಶಿಪ್ ನೀಡುತ್ತಿದೆ. ಅಷ್ಟೇ ಅಲ್ಲ, ಉಚಿತ ಲ್ಯಾಪ್‌ಟಾಪ್, ತಾಂತ್ರಿಕ ತರಬೇತಿ, ಮೆಂಟಾರ್‌ಶಿಪ್ ಜೊತೆಗೆ ಅಮೆಜಾನ್‌ನಲ್ಲೇ ಪೇಯ್ಡ್ ಇಂಟರ್ನ್‌ಶಿಪ್ ಮಾಡುವ ಅವಕಾಶವೂ ಸಿಗಲಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಇಲ್ಲಿದೆ ಮಾಹಿತಿ.

ಅಮೆಜಾನ್ ಫ್ಯೂಚರ್ ಇಂಜಿನಿಯರ್ ಸ್ಕಾಲರ್‌ಶಿಪ್‌ಗೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ₹50,000 ಆರ್ಥಿಕ ನೆರವು ನೀಡಲಾಗುತ್ತದೆ. ನಾಲ್ಕು ವರ್ಷಗಳ ಇಂಜಿನಿಯರಿಂಗ್ ಪದವಿ ಪೂರ್ಣಗೊಳ್ಳುವವರೆಗೆ ಒಟ್ಟು ₹2 ಲಕ್ಷದವರೆಗೆ ಸ್ಕಾಲರ್‌ಶಿಪ್ ಪಡೆಯಬಹುದು. ಇದರಿಂದ ವಿದ್ಯಾರ್ಥಿಗಳ ಶಿಕ್ಷಣದ ವೆಚ್ಚದ ಹೊರೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ.

ಈ ಯೋಜನೆಯ ಮತ್ತೊಂದು ವಿಶೇಷವೆಂದರೆ ಆಯ್ಕೆಯಾದ ಮೊದಲ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತದೆ. ಇದರೊಂದಿಗೆ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯ ಹೆಚ್ಚಿಸಲು ಹಲವು ತರಬೇತಿ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುತ್ತದೆ.

ಅಮೆಜಾನ್ ಇಂಜಿನಿಯರ್‌ಗಳಿಂದ ವಿಶೇಷ ಮೆಂಟಾರ್‌ಶಿಪ್.

ತಾಂತ್ರಿಕ ಬೂಟ್‌ಕ್ಯಾಂಪ್‌ಗಳು ಮತ್ತು ವೆಬಿನಾರ್‌ಗಳು.

ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರಗಳು.

ಆಧುನಿಕ ತಂತ್ರಜ್ಞಾನಗಳ ಕುರಿತು ತರಬೇತಿ.

ಎರಡನೇ ವರ್ಷದ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಬಳಿಕ ಅರ್ಹ ವಿದ್ಯಾರ್ಥಿಗಳಿಗೆ ಅಮೆಜಾನ್‌ನಲ್ಲಿ 8 ವಾರಗಳ ವೇತನ ಸಹಿತ ಇಂಟರ್ನ್‌ಶಿಪ್ ಅವಕಾಶ.

ದೇಶದಾದ್ಯಂತ ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಪದವಿ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ಅರ್ಹತೆಗಳು ಹೀಗಿವೆ:

ಕಂಪ್ಯೂಟರ್ ಸೈನ್ಸ್, ಇನ್ಫರ್ಮೇಷನ್ ಟೆಕ್ನಾಲಜಿ ಅಥವಾ ಸಂಬಂಧಿತ ಇಂಜಿನಿಯರಿಂಗ್ ವಿಭಾಗಗಳಲ್ಲಿ ಓದುತ್ತಿರಬೇಕು.

ಕುಟುಂಬದ ವಾರ್ಷಿಕ ಆದಾಯ ₹3 ಲಕ್ಷಕ್ಕಿಂತ ಕಡಿಮೆ ಇರಬೇಕು.

ಮೆರಿಟ್ ಪ್ರವೇಶ ಪರೀಕ್ಷೆ ಅಥವಾ ಕೌನ್ಸೆಲಿಂಗ್ ಮೂಲಕ ಇಂಜಿನಿಯರಿಂಗ್ ಕೋರ್ಸ್‌ಗೆ ಪ್ರವೇಶ ಪಡೆದಿರಬೇಕು.

ಉತ್ತಮ ಶೈಕ್ಷಣಿಕ ಸಾಧನೆ ಹೊಂದಿರಬೇಕು.

ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಮೊದಲ ವರ್ಷದ ಇಂಜಿನಿಯರಿಂಗ್ ಓದುತ್ತಿರುವ ಮಹಿಳಾ ವಿದ್ಯಾರ್ಥಿನಿಯರಿಗೆ ವಿಶೇಷ ಆದ್ಯತೆ ಇರಲಿದೆ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಫೌಂಡೇಶನ್ ಫಾರ್ ಎಕ್ಸೆಲೆನ್ಸ್ (FFE) ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ: ನವೆಂಬರ್ 30, 2026

ಆಸಕ್ತ ವಿದ್ಯಾರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಅಗತ್ಯ ದಾಖಲೆಗಳೊಂದಿಗೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ. ಸ್ಕಾಲರ್‌ಶಿಪ್‌ಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ FFE ಅಧಿಕೃತ ವೆಬ್‌ಸೈಟ್ ಪರಿಶೀಲಿಸಬಹುದು.

Related Articles

Back to top button