Kannada NewsKarnataka NewsLatest

*ಬಸ್ಸಿನ ಮುಂಭಾಗದ ಚಕ್ರದ ನಟ್ ಕಿತ್ತು ಹೊಲಕ್ಕೆ ನುಗ್ಗಿದ ಬಸ್*: *ತಪ್ಪಿದ ಭಾರೀ ಅನಾಹುತ*

ಪ್ರಗತಿವಾಹಿನಿ ಸುದ್ದಿ: ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದೆ. ಅದೃಷ್ಟವಶಾತ್ ಬಸ್‌ನ ವೇಗ ಕಡಿಮೆ ಇದ್ದ ಕಾರಣ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.

ಕನಕಗಿರಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುತ್ತಿದ್ದ ಬಸ್ ಗಂಗಾನಾಳ ಗ್ರಾಮದ ಸಮೀಪ ಈ ಅವಘಡಕ್ಕೆ ಸಿಲುಕಿದೆ. ಬಸ್‌ನ ಮುಂಭಾಗದ ಚಕ್ರದ ಕಮಾನ್ ಸ್ಪ್ರಿಂಗ್ ಪಟ್ಟಿಯ ನಟ್ ಕಿತ್ತುಹೋದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆ ಬಿಟ್ಟು ಪಕ್ಕದ ಹೊಲಕ್ಕೆ ನುಗ್ಗಿದೆ.

ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ಹೊಲಕ್ಕೆ ನುಗ್ಗುತ್ತಿದ್ದಂತೆ ಸ್ಥಳೀಯರು ಹಾಗೂ ಇತರ ವಾಹನ ಸವಾರರು ನೆರವಿಗೆ ಧಾವಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ.

ಬಸ್‌ನ ವೇಗ ಕಡಿಮೆ ಇದ್ದಿದ್ದರಿಂದ ದೊಡ್ಡ ಅಪಘಾತ ತಪ್ಪಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯೂ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ತಪ್ಪಿಸುವಲ್ಲಿ ನೆರವಾಗಿದೆ.

Related Articles

Back to top button