Belagavi NewsBelgaum NewsKannada NewsKarnataka News

*ರಾಜೇಶ್ವರಿ ಹೆಗಡೆ ಅವರಿಗೆ ‘ಮಮತೆಯ ಮಡಿಲು-2026’ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಬೆಳಗಾವಿಯ ಶಿಕ್ಷಣ ಇಲಾಖೆ ನಿವೃತ್ತ ಅಧೀಕ್ಷಕರು ಹಾಗೂ ಸಾಹಿತಿ ರಾಜೇಶ್ವರಿ ಎಸ್. ಹೆಗಡೆ ಅವರು ‘ಮಮತೆಯ ಮಡಿಲು-2026’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಧಾರವಾಡದ ವಿದ್ಯಾಧರ ಕನ್ನಡ ಪ್ರತಿಷ್ಠಾನವು ಮಾತೋಶ್ರೀ ಜಾನಕಿಬಾಯಿ ರಂಗರಾವ್ ಮುತಾಲಿಕ ದೇಸಾಯಿ ಅವರ ಸ್ಮರಣಾರ್ಥವಾಗಿ ನೀಡುವ ಈ ಪ್ರತಿಷ್ಠಿತ ಪ್ರಶಸ್ತಿಗೆ ರಾಜೇಶ್ವರಿ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಾಹಿತ್ಯಿಕ ಕೊಡುಗೆಯನ್ನು ಪರಿಗಣಿಸಿ ಆಯ್ಕೆ ಸಮಿತಿಯು ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 13, 2026ರಂದು ಧಾರವಾಡದ ರಂಗಾಯಣದಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ ಎಂದು ವಿದ್ಯಾಧರ ಕನ್ನಡ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button