*ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ*: *ರಾಜ್ಯಪಾಲೆ ಸುಧಾ ಯಾದವ್, ಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ಆತ್ಮೀಯ ಸ್ವಾಗತ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ರಾಜಧಾನಿಗೆ ಆಗಮಿಸಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲೆ ಸುಧಾ ಯಾದವ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಜಿಗಣಿ ಬಳಿಯಿರುವ ಪ್ರಶಾಂತಿ ಕುಟೀರ ಆಶ್ರಮದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ಭದ್ರತೆಯನ್ನು ಕಟ್ಟುನಿಟ್ಟಿಗೊಳಿಸಲಾಗಿದ್ದು, ಕೇವಲ ಪಾಸ್ ಹಾಗೂ ಅಧಿಕೃತ ಐಡಿ ಕಾರ್ಡ್ ಹೊಂದಿರುವ ಗಣ್ಯರಿಗೆ ಮಾತ್ರ ಒಳಹೋಗಲು ಅನುಮತಿ ನೀಡಲಾಗಿದೆ.
ಬಳಿಕ ಪ್ರಧಾನಿ ಮೋದಿಯವರು ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಲಿದ್ದಾರೆ. ಐಐಎಂ ಆಡಿಟೋರಿಯಂನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೇವಲ 4 ಜನ ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಸುರಕ್ಷತೆಯ ದೃಷ್ಟಿಯಿಂದ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ನಿರ್ಬಂಧ ಹಾಗೂ ನೋ ಫ್ಲೈ ಝೋನ್ ಘೋಷಿಸಲಾಗಿದೆ.
ಇಂದು 7.5 ಕಿ.ಮೀ. ಉದ್ದದ ಪಿಂಕ್ ಲೈನ್ ಮಾರ್ಗ ಉದ್ಘಾಟನೆಯಾಗುತ್ತಿದ್ದಂತೆ, ಬೆಂಗಳೂರಿನ ‘ನಮ್ಮ ಮೆಟ್ರೋ’ ಒಟ್ಟು 103.6 ಕಿ.ಮೀ. ವ್ಯಾಪ್ತಿಯೊಂದಿಗೆ ಹೊಸ ಮೈಲಿಗಲ್ಲು ಸ್ಥಾಪಿಸಲಿದೆ. ಈ ಮೂಲಕ 102 ಕಿ.ಮೀ. ಜಾಲ ಹೊಂದಿರುವ ಮುಂಬೈ ಮೆಟ್ರೋವನ್ನು ಹಿಂದಿಕ್ಕಿ, ದೆಹಲಿ (374.5 ಕಿ.ಮೀ.) ಬಳಿಕ ದೇಶದ ಎರಡನೇ ಅತಿದೊಡ್ಡ ಹಾಗೂ ಅತಿ ವೇಗವಾಗಿ ಬೆಳೆದ ಮೆಟ್ರೋ ಜಾಲ ಎಂಬ ಹೆಗ್ಗಳಿಕೆಗೆ ಸಿಲಿಕಾನ್ ಸಿಟಿ ಪಾತ್ರವಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




