*ಪತ್ನಿಯ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ*: *ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ*

ಪ್ರಗತಿವಾಹಿನಿ ಸುದ್ದಿ: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಪತ್ನಿಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಕಚೇರಿಗೆ ಆಗಮಿಸುತ್ತಿದ್ದ ಉದ್ಯಮಿ ಮೇಲೆ ಬೈಕ್‌ನಲ್ಲಿ ಬಂದಿದ್ದ ನಾಲ್ಕೈದು ಮಂದಿಯ ತಂಡ ಏಕಾಏಕಿ ದಾಳಿ ನಡೆಸಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದೆ.
ಕೊಲೆಯಾದ ಉದ್ಯಮಿಯನ್ನು 35 ವರ್ಷದ ಚರಣ್ ಎಂದು ಗುರುತಿಸಲಾಗಿದೆ. ಮೃತ ಚರಣ್ ‘ಧಣಿ ಪ್ರಾಪರ್ಟಿಸ್’ ಸಂಸ್ಥೆಯ ಮಾಲೀಕರಾಗಿದ್ದು ಇಂದು ಬೆಳಗ್ಗೆ ಸುಮಾರು 10.45ರ ವೇಳೆಗೆ ಕಚೇರಿಗೆ ಬರುತ್ತಿದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಪತ್ನಿಯ ಎದುರೇ ನಡೆದ ಈ ದಾಳಿಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದಾಳಿ ನಡೆಸಿದ ಬಳಿಕ ಆರೋಪಿಗಳು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಯಲಹಂಕ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಯ ಹಿಂದೆ ಹಳೇ ವೈಷಮ್ಯ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ತನಿಖೆಯ ಬಳಿಕ ಹತ್ಯೆಯ ಹಿಂದಿನ ನಿಖರ ಕಾರಣ ತಿಳಿದುಬರಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




