
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಒಣಹವೆ ಮುಂದುವರಿದಿದ್ದು, ಸದ್ಯಕ್ಕೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಲಕ್ಷಣಗಳಿಲ್ಲದೆ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಇದೇ ವಾತಾವರಣ ಮುಂದುವರಿಯಲಿದೆ.
ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಮತ್ತು ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಒಂದೆಡೆ ಮಳೆಯಿಲ್ಲದೆ ಒಣಹವೆ ಮುಂದುವರಿದಿದ್ದರೆ, ಮತ್ತೊಂದೆಡೆ ರಾಜ್ಯದ ಕೆಲವು ಭಾಗಗಳಲ್ಲಿ ಚಳಿಯ ತೀವ್ರತೆಯೂ ಹೆಚ್ಚಾಗುತ್ತಿದೆ. ರಾಜ್ಯದ ಬಯಲು ಪ್ರದೇಶಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಶಿವಮೊಗ್ಗದಲ್ಲಿ ಅತಿ ಕಡಿಮೆ 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ಬೆಳಗಿನ ಜಾವ ಚಳಿಯ ಅನುಭವ ಹೆಚ್ಚಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




