CrimeKarnataka NewsLatest

*ಆಟವಾಡುತ್ತಿದ್ದಾಗ ದುರಂತ*: *ಕೆಮಿಕಲ್ ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು*

ಪ್ರಗತಿವಾಹಿನಿ ಸುದ್ದಿ: ಮಕ್ಕಳು ಆಟವಾಡುತ್ತಿದ್ದಾರೆ ಎಂದು ಪೋಷಕರು ಸ್ವಲ್ಪ ನಿರ್ಲಕ್ಷ್ಯ ಮಾಡಿದರೂ ಎಂತಹ ಅನಾಹುತಗಳನ್ನು ಮಾಡಿಕೊಳ್ಳುತ್ತಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಆಟವಾಡುತ್ತಿದ್ದ ಪುಟ್ಟ ಕಂದಮ್ಮ ಆಕಸ್ಮಿಕವಾಗಿ ಕೆಮಿಕಲ್ ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟಿದೆ. ಸುಬ್ರಮಣಿ ಮೃತ ಮಗು. ನವೆಂಬರ್ .2ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಗು ವಾಸವಿದ್ದ ಮನೆಯ ಪಕ್ಕದಲ್ಲಿ ಕೆಮಿಕಲ್ ಫ್ಯಾಕ್ಟರಿ ಇತ್ತು. ಮಗು ಆಟವಾಡುತ್ತಾ ಕೆಮಿಕಲ್ ಫ್ಯಾಕ್ಟರಿಗೆ ಬಂದಿದ್ದು, ಈ ವೇಳೆ ಏಕಾಏಕಿ ಬಕೆಟ್ ಬಿದ್ದಿತ್ತು. ಕೂಡಲೇ ಅಲ್ಲಿದ್ದವರು ಮಗುವನ್ನು ಎತ್ತಿಕೊಂಡು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ. ಮಗು ಕೆಮಿಕಲ್ ಬಕೆಟ್‌ಗೆ ಬಿದ್ದ ದೃಶ್ಯ ಫ್ಯಾಕ್ಟರಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಶ್ರೀರಾಮಪುರದಲ್ಲಿ ಈ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button