CrimeKannada NewsKarnataka NewsLatest

*ಹಾಲು ತರಲು ಹೋದ 9 ವರ್ಷದ ಬಾಲಕಿಗೆ ಬೈಕ್ ಡಿಕ್ಕಿ*: *ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ*

ಪ್ರಗತಿವಾಹಿನಿ ಸುದ್ದಿ: ಬೆಳಗ್ಗೆ ಹಾಲು ತರಲು ಅಂಗಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಾಲಕಿ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗಳಾಗಿವೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ನೋಡುಗರ ಎದೆ ನಡುಗಿಸುವಂತಿದೆ.

ನಾಲ್ಕನೇ ತರಗತಿಯಲ್ಲಿ ಓದುತ್ತಿರುವ 9 ವರ್ಷದ ಮಧುಮಿತಾ ಗಾಯಗೊಂಡ ಬಾಲಕಿ. ಬೆಂಗಳೂರಿನ ಹೆಸರಘಟ್ಟದಲ್ಲಿ ತಾಯಿ ಮಂಜುಶ್ರೀ ಜೊತೆ ವಾಸವಿದ್ದ ಮಧುಮಿತಾ, ಎಂದಿನಂತೆ ಬೆಳಗ್ಗೆ 8 ಗಂಟೆ ಸುಮಾರಿಗೆ ಮನೆಯಿಂದ ಹಾಲು ತರಲು ಅಂಗಡಿಗೆ ತೆರಳಿದ್ದಳು. ಹಾಲು ಖರೀದಿಸಿ ವಾಪಸ್ ಬರುತ್ತಿದ್ದಾಗ ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಹಾರಿ ಬಿದ್ದಿದ್ದು, ಇಡೀ ಅಪಘಾತದ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಲೆಗೆ ಗಂಭೀರ ಗಾಯಗಳಾಗಿರುವ ಮಧುಮಿತಾಳನ್ನು ಸ್ಥಳೀಯರು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಾಲಕಿಗೆ ಚಿಕಿತ್ಸೆ ಮುಂದುವರಿದಿದೆ.

ವಿಷಯ ತಿಳಿದು ಚಿಕ್ಕಬಾಣಾವರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Related Articles

Back to top button