Belagavi NewsBelgaum NewsCrimeKannada NewsKarnataka News
*ಬೆಳಗಾವಿಯಲ್ಲಿ ಕಾರು–ಕ್ರೂಸರ್ ನಡುವೆ ಭೀಕರ ಅಪಘಾತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾರು ಮತ್ತು ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ–ಮೊಳೆ ರಸ್ತೆಯಲ್ಲಿ ನಡೆದಿದೆ.
ಎರಡೂ ವಾಹನಗಳು ವೇಗವಾಗಿ ಚಲಿಸುತ್ತಿದ್ದ ವೇಳೆ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರು ಹಾಗೂ ಕ್ರೂಸರ್ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ. ಗಾಯಗೊಂಡ ನಾಲ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಮಾಧಾನಕರ ಸಂಗತಿಯಾಗಿದೆ. ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.



