Kannada NewsKarnataka NewsLatest

*ಪ್ರದೀಪ್ ಈಶ್ವರ್ ಮನೆಗೆ ಮಹಾಲಕ್ಷ್ಮಿಯ ಆಗಮನ*: *ತಂದೆಯಾದ ಸಂಭ್ರಮದಲ್ಲಿ ಚಿಕ್ಕಬಳ್ಳಾಪುರ  ಶಾಸಕ*

ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ಶಾಸಕ ಪ್ರದೀಪ್ ಈಶ್ವರ್ ಹಾಗೂ ಪತ್ನಿ ನಯನ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಕುಟುಂಬಕ್ಕೆ ಪುಟ್ಟ ಮಹಾಲಕ್ಷ್ಮಿಯ ಆಗಮನವಾಗಿದೆ.

ತಂದೆಯಾಗಿರುವ ಸಂತಸದ ವಿಚಾರವನ್ನು ಶಾಸಕ ಪ್ರದೀಪ್ ಈಶ್ವರ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ನವಜಾತ ಹೆಣ್ಣು ಮಗುವನ್ನು ಕೈಯಲ್ಲಿ ಎತ್ತಿಕೊಂಡು ಮುದ್ದಾಡುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿರುವ ಶಾಸಕರು, ತಮ್ಮ ಜೀವನದ ವಿಶೇಷ ಕ್ಷಣವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಪ್ರದೀಪ್ ಈಶ್ವರ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿತೈಷಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Related Articles

Back to top button