Kannada NewsKarnataka NewsLatest
*ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ದಿಢೀರ್ ವರ್ಗಾವಣೆ*: *ನೂತನ ಪೊಲೀಸ್ ಆಯುಕ್ತರಾಗಿ ಹಿತೇಂದ್ರ ನೇಮಕ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ದುರಂತಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರನ್ನು ಅಮಾನತುಗೊಳಿಸಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಹೊಸ ಆಯುಕ್ತರನ್ನಾಗಿ ನೇಮಿಸಲಾಗಿತ್ತು. ಇದೀಗ ಸೀಮಂತ್ ಕುಮಾರ್ ಅವರನ್ನೂ ವರ್ಗಾವಣೆ ಮಾಡಿ ನೂತನ ಪೊಲೀಸ್ ಆಯುಕ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ನಗರ ನೂತನ ಪೊಲೀಸ್ ಕಮಿಷನರ್ ಆಗಿ ಆರ್. ಹಿತೇಂದ್ರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿಯಾಗಿದ್ದ ಆರ್ ಹಿತೇಂದ್ರ ಅವರನ್ನು ಹೊಸ ಕಮಿಷನರ್ ಆಗಿ ನೇಮಿಸಲಾಗಿದೆ.



