*ಬೆಳಗಾವಿಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನ ವಿರುದ್ಧ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಸಾರ್ವಜನಿಕ ಸ್ಥಳದಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ ಯುವಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದ್ದು, ಆತನ ವಿರುದ್ಧ ಮಾರ್ಕೆಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಗರದ ಖಂಜರ ಗಲ್ಲಿಯಲ್ಲಿ ನವೆಂಬರ್ 17ರಂದು ಈ ಘಟನೆ ನಡೆದಿದೆ. ಬೆಂಡಿ ಬಜಾರ್‌ನ ಬಾಸಿಬನ್ ಮಸೀದಿ ಹಿಂಭಾಗದ ನಿವಾಸಿ ಶೂಫಿಯಾನ್ ಅಬ್ದುಲ್ ರಹೀಮ್ ಕಚಿ (23) ಸಾರ್ವಜನಿಕ ಸ್ಥಳದಲ್ಲಿ ಅಸಹಜವಾಗಿ ವರ್ತಿಸುತ್ತಿರುವುದನ್ನು ಗಮನಿಸಿದ ಮಾರ್ಕೆಟ್ ಠಾಣೆಯ ಎಎಸ್‌ಐ ಶಂಕರ ಶಿಂಧೆ ಹಾಗೂ ಸಿಬ್ಬಂದಿ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ಈ ವೇಳೆ ಯುವಕ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 240/2026ರ ಅಡಿಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(ಬಿ) ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಈ ಕಾರ್ಯಾಚರಣೆ ನಡೆಸಿದ ಎಎಸ್‌ಐ ಶಂಕರ ಶಿಂಧೆ ಹಾಗೂ ಪೊಲೀಸ್ ಸಿಬ್ಬಂದಿಯ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಮತ್ತು ಡಿಸಿಪಿ ಶ್ಲಾಘಿಸಿದ್ದಾರೆ.



