Kannada NewsKarnataka NewsLatest

*RFO ಮನೆ ಮೇಲೆ ಲೋಕಾಯುಕ್ತ ದಾಳಿ*: *ಒಂದೇ ಅಪಾರ್ಟ್‌ಮೆಂಟ್‌ನಲ್ಲಿ 12 ಮನೆಗಳು, ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ವಲಯ ಅರಣ್ಯಾಧಿಕಾರಿ (RFO) ಸುರೇಂದ್ರ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಅಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿದೆ.

ಮೈಸೂರು ಅರಣ್ಯ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ RFO ಸುರೇಂದ್ರ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆದಾಯಕ್ಕಿಂತ ಅಧಿಕ ಆಸ್ತಿ ಪತ್ತೆಯಾಗಿದೆ. ಗಳಿಕೆಗಿಂತ 130% ಅಧಿಕ ಆಸ್ತಿ ಇರುವುದನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ದಾಳಿ ವೇಳೆ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ 12 ಮನೆಗಳನ್ನು ಹೊಂದಿರುವುದು ಗೊತ್ತಾಗಿದೆ. ಅಲ್ಲದೇ ಮನೆಯಲ್ಲಿ 350ಗ್ರಾಂ ಚಿನ್ನ ಸಹ ಪತ್ತೆಯಾಗಿದೆ. ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಚಾಮರಾಜನಗರ ಲೋಕಾಯುಕ್ತ ಪೊಲೀಸರು ಅರಣ್ಯಾಧಿಕಾರಿ ಸುರೇಂದ್ರ ಅವರ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹೊಂದಿರುವುದು ದೃಢಪಟ್ಟಿದೆ. ಸ್ಥಿರ ಮತ್ತು ಚರಾಸ್ತಿಗಳಿಗೆ ಸಂಬಂಧಿಸಿದ ದಾಖಲಾತಿಗಳನ್ನು ಅಮಾನತುಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button