Kannada NewsKarnataka NewsLatest

*10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಹಾಸ್ಟೆಲ್​ನಿಂದ ಪರಾರಿ*

ಪ್ರಗತಿವಾಹಿನಿ ಸುದ್ದಿ: ಶಿಕ್ಷಕರು ಬೈದರು ಎಂಬ ಕಾರಣಕ್ಕೆ ನಾಲ್ವರು ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಈ ಘಟನೆ ನಡೆದಿದೆ. ರಾಮನಗರದ ಕೆಂಪೇಗೌಡ ಸರ್ಕಲ್ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಬುಧವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಹಾಸ್ಟೆಲ್‌ನಿಂದ ಪರಾರಿಯಾಗಿದ್ದಾರೆ.

ಶಿಕ್ಷಕರು ಬೈದರು ಎಂಬ ಕಾರಣಕ್ಕೆ ಮನನೊಂದು ರಾತ್ರಿ ವೇಳೆ ಶಾಲೆಯ ಕಾಂಪೌಂಡ್ ಹಾರಿ ಹೊರಹೋಗಿದ್ದಾರೆ. ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಸಂಬಂಧ ವಸತಿ ಶಾಲೆಯ ಪ್ರಾಂಶುಪಾಲರು ರಾಮನಗರದ ಐಜೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Related Articles

Back to top button