ಯತ್ನಾಳ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಖಂಡ್ರೆ ಆಗ್ರಹ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಬಿಜೆಪಿಯವರಿಗೆ ನಿಜಕ್ಕೂ ದೇಶಭಕ್ತಿ ಎಂಬುದು ಇದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಶಾಸಕ ಸ್ಥಾನವನ್ನು ಕೂಡಲೇ ರದ್ದುಪಡಿಸಲಿ ಎಂದು ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

ಹಿರಿಯ ಸ್ವಾತಂತ್ರ್ಯಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ವಿರುದ್ಧದ ಯತ್ನಾಳ್ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಈಶ್ವರ್ ಖಂಡ್ರೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಂತವರಿಗೆ ಮಾಡಲು ಬೇರೆ ಏನೂ ಕೆಲಸವಿಲ್ಲ ಹೀಗಾಗಿ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅಂತವರನ್ನು ಟೀಕೆ ಮಾಡುತ್ತ, ಅವಮಾನ ಮಾಡುತ್ತಿದ್ದಾರೆ. ಯತ್ನಾಳ್ ಗೆ ನಿಜಕ್ಕೂ ದೇಶ ಭಕ್ತಿಯಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು.

Home add -Advt

ಮಹಾತ್ಮಾ ಗಾಂಧಿ ಅವರ 150ನೇ ಜನ್ಮ ದಿನಾಚರಣೆಯನ್ನು ಆಚರಿಸುವ ಇದೇ ಬಿಜೆಪಿ ನಾಯಕರು ಒಂದೆಡೆ ಗಾಂಧಿ ಅವರ ಭಾವಚಿತ್ರಕ್ಕೆ ಗುಂಡು ಹಾರಿಸಿ ವಿಕೃತ ಸಂತೋಷ ಪಡೆಯುತ್ತಾರೆ. ಇನ್ನೊಂದೆದೆ ದೇಶಪ್ರೇಮದ ಕುರಿತು ಪಾಠ ಮಾಡುತ್ತಲೇ ನಿಜವಾಗಿಯೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಾರೆ ಎಂದು ಕಿಡಿಕಾರಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಮಾಡೋಕೆ ಬೇರೆ ಏನೂ ಕೆಲಸ ಇಲ್ಲ ಅದಕ್ಕೆ ಸ್ವಾತಂತ್ರ್ಯ ಹೋರಾಟಗಾರದೊರೆಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿತ್ತಿದ್ದಾರೆ. ಬಿಜೆಪಿಯವರಿಗೆ ದೇಶಭಕ್ತಿ ಎಂಬುದಿದ್ದರೆ ಯತ್ನಾಳ್ ಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ ಎಂದು ಒತ್ತಾಯಿಸಿದರು.

Related Articles

Back to top button