Belagavi NewsBelgaum NewsEducationKannada NewsKarnataka News

*ಬೆಳಗಾವಿಯ 26 ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಕಮಿಷನರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ನಾಳೆ (ನ.21) ಬೆಳಗಾವಿ ನಗರದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಾರಾಗೃಹ ಇಲಾಖೆ, ಕೆಇಎ, ಕ್ರೈಸ್ ಹಾಗೂ ಶಾಲಾ ಶಿಕ್ಷಣ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 4.30ರವರೆಗೆ ನಗರದ ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗಳು ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಆದೇಶ ಹೊರಡಿಸಿದ್ದಾರೆ.

Related Articles

Back to top button