Kannada NewsKarnataka NewsLatest

*ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣ*: *ಕೃಪಾ ಆಳ್ವ ಸೇರಿ ಹಲವು ಆರೋಪಿಗಳಿಗೆ ಬಿಗ್ ಶಾಕ್ ಕೊಟ್ಟ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ನಾಯಕಿ ಕೃಪಾ ಆಳ್ವಾಗೆ ಕೋರ್ಟ್ ಶಾಕ್ ಕೊಟ್ಟಿದೆ.

ಬೆಂಗಳೂರಿನ 66 ನೇ ಸಿಸಿಹೆಚ್ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಖಾಸಗಿ ವಾಹಿನಿ ಮುಖ್ಯಸ್ಥನ ನಿರೀಕ್ಷಣಾ ಜಾಮೀನು ಅರ್ಜಿಯೂ ತಿರಸ್ಕಾರಗೊಂಡಿದ್ದು, ವಿಡಿಯೋ ಪೋಸ್ಟ್ ಮಾಡಿದ ಆರೋಪ ಹೊತ್ತವರಿಗೂ ಸಂಕಷ್ಟ ಎದುರಾಗಿದೆ.

ಪ್ರಜ್ವಲ್ ಪ್ರಸಾದ್, ಚಂದನ್.ಹೆಚ್.ಎಸ್, ಮೋಹನ್ ಗೌಡ, ಪ್ರಶಾಂತ್ ಕುಮಾರ್ ಮತ್ತು ವಿನೋದ್ ಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿಗಳನ್ನೂ ಕೋರ್ಟ್​ ವಜಾಗೊಳಿದೆ. ಈ ಹಿಂದೆ ನವೆಂಬರ್​​ 2ರಂದು ಪ್ರಕರಣ ಸಂಬಂಧ ಕೃಪಾ ಆಳ್ವಾ ಸೇರಿದಂತೆ ವಿನೋದ್ ಕುಮಾರ್, ಪ್ರಶಾಂತ್ ಕುಮಾರ್​​ಗೆ ಇದೇ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಪೊಲೀಸರ ತನಿಖೆಗೆ ಆರೋಪಿಗಳು ಸಹಕರಿಸಬೇಕು ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಸೂಚಿಸಿತ್ತು.

2023ರ ಫೆಬ್ರವರಿಯಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾದ ಮತ್ತು 2026ರ ಸೆಪ್ಟೆಂಬರ್‌ನಲ್ಲಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಆದ ವಿಡಿಯೋದಲ್ಲಿ ಕೃಪಾ ಆಳ್ವಾ ಹಾಗೂ ಖಾಸಗಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಕಾಣಿಸಿಕೊಂಡಿದ್ದರು. ಹೀಗಾಗಿ ಈ ಸ್ಟಿಂಗ್ ಆಪರೇಷನ್ ಷಡ್ಯಂತ್ರದ ಹಿಂದೆ ಇವರಿಬ್ಬರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಪಕ್ಷವಿರೋಧಿ ಚಟುವಟಿಕೆ ಮತ್ತು ಈ ವಿವಾದದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಕೃಪಾ ಆಳ್ವಾರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿತ್ತು. ಆದರೆ ವಿಚಾರಣೆ ವೇಳೆ ತಾವು ನಿರಪರಾಧಿ ಎಂದು ಹೇಳಿಕೊಂಡಿರುವ ಕೃಪಾ ಆಳ್ವಾ, ಸ್ಟಿಂಗ್ ವಿಡಿಯೋ ವಿಚಾರವಾಗಿ ರಾಕೇಶ್ ಶೆಟ್ಟಿ ತಮ್ಮನ್ನು ಸಂಪರ್ಕಿಸಿದ್ದರು ಎಂದಿದ್ದರು. ಅಲ್ಲದೆ, ಅವರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂಬ ವಿಷಯ ತಮಗೆ ತಿಳಿದಿರಲಿಲ್ಲ ಮತ್ತು ವಿಡಿಯೋ ಅಪ್‌ಲೋಡ್ ಮಾಡುವುದರಲ್ಲಿ ತಮ್ಮ ಪಾತ್ರವಿಲ್ಲ ಎಂದು ತಿಳಿಸಿದ್ದರು.

ಪ್ರಕರಣ ಸಂಬಂಧ ಕೃಪಾ ಆಳ್ವಾ ಅದಾಗಲೇ ಮೂರು ಬಾರಿ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಹಳೇ ಮೊಬೈಲ್ ಸಮೇತ ವಿಚಾರಣೆಗೆ ಹಾಜರಾಗಲು ಕೃಪಾಗೆ ಪೊಲೀಸರು ಸೂಚಿಸಿದ್ದರು. ತಮ್ಮ ಬಳಿ ಪ್ರಸ್ತುತ ಆ ಮೊಬೈಲ್​​ ಬಳಕೆಯಲ್ಲಿಲ್ಲ ಎಂದು ಕೃಪಾ ಆಳ್ವಾ ತಿಳಿಸಿದ್ದರಾದರೂ ಅಂತಿಮವಾಗಿ ಮೊಬೈಲ್​​ ನೀಡೋದಾಗಿ ಹೇಳಿದ್ದರು. ಆದರೆ ಈವರೆಗೂ ಅವರು ಪೊಲೀಸರಿಗೆ ತಮ್ಮ ಹಳೆಯ ಮೊಬೈಲ್​​ ಹಸ್ತಾಂತರಿಸಿಲ್ಲ ಎನ್ನಲಾಗಿದೆ. ಈ ನಡುವೆ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.

Related Articles

Back to top button