CrimeKannada NewsKarnataka NewsLatest

*ಪತಿ ಆತ್ಮಹತ್ಯೆ ಕಂಡು ಪತ್ನಿಯೂ ಪ್ರಾಣಬಿಟ್ಟಳೇ?*: *ದಂಪತಿ ಸಾವಿನ ಸುತ್ತ ಅನುಮಾನದ ಹುತ್ತ*

ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹದ ಹಿನ್ನೆಲೆ ಪತಿ ಮತ್ತು ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ನಡೆದಿದೆ. ದಂಪತಿಯ ಸಾವಿನಿಂದ ಇಬ್ಬರು ಹೆಣ್ಣು ಮಕ್ಕಳು ಅನಾಥರಾಗಿದ್ದು ಕುಟುಂಬಸ್ಥರಲ್ಲಿ ಆಕ್ರಂದನ ಮಡುಗಟ್ಟಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಅಪ್ಪಾಶಿ ಶಿವಪ್ಪ ನಡುವಿನಮನಿ (35) ಮತ್ತು ರಾಜೇಶ್ವರಿ ನಡುವಿನಮನಿ (30) ಮೃತ ದಂಪತಿ.

ಮೊದಲು ಅಪ್ಪಾಶಿ ಶಿವಪ್ಪ ಮನೆಯ ಹೊರಗಿರುವ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಪತಿಯ ಆತ್ಮಹತ್ಯೆಯನ್ನು ಕಂಡ ಪತ್ನಿ ರಾಜೇಶ್ವರಿ ಕೂಡ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

ಘಟನೆ ಕುರಿತು ಬಾಗಲಕೋಟೆ ಎಸ್‌ಪಿ ಸಿದ್ದಾರ್ಥ ಗೋಯಲ್ ಮಾಹಿತಿ ನೀಡಿದ್ದು, ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಲಿ ಗ್ರಾಮದ ತೋಟದ ಮನೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಪತ್ನಿಯ ಮನೆಯವರಿಂದ ದೂರು ಸ್ವೀಕರಿಸಿರುವ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿಯಬೇಕಿದೆ ಎಂದು ಎಸ್‌ಪಿ ಹೇಳಿದ್ದಾರೆ.

Related Articles

Back to top button