Belagavi NewsBelgaum NewsCrimeKannada NewsKarnataka NewsNational
*ಮಟಕಾ ಅಡ್ಡೆ ಮೇಲೆ ಮಾರ್ಕೆಟ್ ಪೊಲೀಸರ ದಾಳಿ*: *ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಖಂಜರ್ ಗಲ್ಲಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಮಟಕಾ ಜೂಜಾಟದ ಅಡ್ಡೆ ಮೇಲೆ ಮಾರ್ಕೆಟ್ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಟಕಾ ಆಟದಲ್ಲಿ ಅಂಕಿ-ಸಂಖ್ಯೆಗಳ ಮೇಲೆ ಹಣ ಪಣಕ್ಕಿಟ್ಟು ಜೂಜಾಟ ಆಡುತ್ತಿದ್ದ ಸಾಕೀಬ್ ಮೊಹಮ್ಮದಲಿ ಅಡ್ಡೇವಾಲೆ ಹಾಗೂ ಫಹೀಮ್ ಜಿಲಾನಿ ಕೊತ್ವಾಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಆರೋಪಿಗಳಿಂದ 1,210 ರೂಪಾಯಿ ನಗದು ಹಣ ಹಾಗೂ ಮಟಕಾ ಜೂಜಾಟಕ್ಕೆ ಬಳಸುತ್ತಿದ್ದ ಚೀಟಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಟಕಾ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



