EducationKannada NewsKarnataka NewsLatest

*ವಸತಿ ಶಾಲೆಯ ಊಟದಲ್ಲಿ ರಾಶಿ ರಾಶಿ ಹುಳಗಳು ಪತ್ತೆ*: *ಕಂಗಾಲಾದ ಮಕ್ಕಳು*

ಪ್ರಗತಿವಾಹಿನಿ ಸುದ್ದಿ: ವಸತಿ ಶಾಲೆಯಲ್ಲಿ ನೀಡಲಾಗಿದ್ದ ಊಟದಲ್ಲಿ ರಾಶಿ ರಾಶಿ ಹುಳುಗಳು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ವಸತಿ ಶಾಲೆಯಲ್ಲಿ ಅಡಿಗೆ ಮಾಡುವವರ ಬೇಜವಾಬ್ದಾರಿಗೆ ಮಕ್ಕಳ ಆರೋಗ್ಯದ ಸ್ಥಿತಿ ಏನಾಗಬೇಕು? ಎಂಬ ಆಕ್ರೋಶ ವ್ಯಕ್ತವಾಗಿದೆ.

ಪ್ರತಿಷ್ಠಿತ ವಸತಿ ಶಾಲೆಯಲ್ಲಿಯೇ ಈ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ತೆಲಗರಹಳ್ಳಿ ಬಳಿಯ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಮಕ್ಕಳು ಊಟ ಮಾಡುತ್ತಿದ್ದಾಗ ಹುಳಗಳು ಪತ್ತೆಯಾಗಿವೆ. ಇದನ್ನು ಕಂಡು ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಇನ್ನೂ ಶಾಲೆಯಲ್ಲಿ ಕಳೆದೆರಡು ದಿನಗಳಿಂದ ಕುಡಿಯಲು ನೀರು ಸಹ ಇಲ್ಲ. ಇದರ ಬೆನ್ನಲ್ಲೇ ಊಟದ ಗುಣಮಟ್ಟದ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಹಾಸ್ಟೆಲ್‌ನಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಬಡ ವಿಧ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಶಿಕ್ಷಕರು, ಅಡುಗೆ ಸಹಾಯಕರು, ವಾರ್ಡನ್ ಕಳಪೆ ಆಹಾರ ನೀಡುತ್ತಿದ್ದಾರೆ ಎಂದು ವಿಧ್ಯಾರ್ಥಿಗಳು ರೋಸಿ ಹೋಗಿ ಪ್ರತಿಭಟನೆ ನಡೆಸಿದ್ದಾರೆ. ವಿಧ್ಯಾರ್ಥಿಗಳ ಪ್ರತಿಭಟನೆಗೆ ವಕೀಲರು ಸಾಥ್ ನೀಡಿದ್ದಾರೆ.

Related Articles

Back to top button