*ದರ್ಶನ್–ಪವಿತ್ರಾ ವಿಡಿಯೋ ಬಳಿಕ ಮೌನವಾಗಿದ್ದ ವಿಜಯಲಕ್ಷ್ಮಿ*: *ದಾಸನಿಗಾಗಿ ದರ್ಗಾ ಮೊರೆ ಹೋದರೇ?*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಮತ್ತು ಪವಿತ್ರಾ ಗೌಡ ನಡುವಿನ ವಿಡಿಯೋ ಕಾಲ್ ಸಂಭಾಷಣೆ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ವಿಜಯಲಕ್ಷ್ಮಿ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬೆಳವಣಿಗೆಯ ಬಳಿಕ ಮೌನವಾಗಿದ್ದ ವಿಜಯಲಕ್ಷ್ಮಿ ಇದೀಗ ದರ್ಗಾ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ತಮ್ಮ ಇಷ್ಟಾರ್ಥ ನೆರವೇರಲಿ ಎಂದು ದೇವರ ಮೊರೆ ಹೋಗಿರುವ ಅವರ ನಡೆ ಕುತೂಹಲ ಮೂಡಿಸಿದೆ.
ಇತ್ತೀಚೆಗೆ ದರ್ಶನ್ ಮತ್ತು ಪವಿತ್ರಾ ಗೌಡ ವಿಡಿಯೋ ಕಾಲ್ನಲ್ಲಿ ಮಾತನಾಡಿಕೊಂಡಿದ್ದರು ಎನ್ನಲಾದ ವಿಚಾರ ಮುನ್ನೆಲೆಗೆ ಬಂದಿತ್ತು. ಈ ಬೆಳವಣಿಗೆಯ ಬಳಿಕ ವಿಜಯಲಕ್ಷ್ಮಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿದ್ದರು. ಇದೀಗ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿರುವ ವಿಚಾರ ಗಮನ ಸೆಳೆದಿದೆ.
ಇನ್ನು ನಟ ಧನ್ವೀರ್ ಮತ್ತು ವಿಜಯಲಕ್ಷ್ಮಿ ನಡುವೆಯೂ ಇತ್ತೀಚೆಗೆ ಜಟಾಪಟಿ ನಡೆದಿತ್ತು. ಇಬ್ಬರ ನಡುವಿನ ವಾಗ್ವಾದ ಹಾಗೂ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಧನ್ವೀರ್ ವಿರುದ್ಧ ಮೂರು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿದ್ದವು.
ಈ ಪ್ರಕರಣದಲ್ಲಿ ಧನ್ವೀರ್ಗೆ ಕರ್ನಾಟಕ ಹೈಕೋರ್ಟ್ನಿಂದ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿರುವ ಮೂರು ಎಫ್ಐಆರ್ಗಳ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.




