Kannada NewsKarnataka NewsPolitics

*ರಾಜ್ಯ ನಿಗಮ-ಮಂಡಳಿ ಅಧ್ಯಕ್ಷರು, ಮುಖ್ಯ ಸಚೇತಕರ ಪಟ್ಟಿ ಪ್ರಕಟ*: *ಯಾರಿಗೆ ಯಾವ ಹುದ್ದೆ?

ಪ್ರಗತಿವಾಹಿನಿ ಸುದ್ದಿ: ರಾಜ್ಯದ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳು, ಸರ್ಕಾರಿ ಮುಖ್ಯ ಸಚೇತಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಅಧಿಕೃತ ಪಟ್ಟಿ ಪ್ರಕಟವಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರ ಅಧಿಕೃತ ಲೆಟರ್‌ಹೆಡ್‌ನಲ್ಲಿ ರಾಜ್ಯದ 18 ಪ್ರಮುಖ ನಾಯಕರಿಗೆ ಪ್ರಮುಖ ಹುದ್ದೆಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಾದ ತನ್ವೀರ್ ಸೇಠ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ, ಬೇಲೂರು ಗೋಪಾಲಕೃಷ್ಣ ಅವರಿಗೆ ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ ಹಾಗೂ ಮಂಜುನಾಥ ಭಂಡಾರಿ ಅವರಿಗೆ ವಿಧಾನಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವ ಮೂಲಕ ಹೈಕಮಾಂಡ್ ಅಸಮಾಧಾನ ಶಮನಗೊಳಿಸಲು ಮುಂದಾಗಿದೆ.

ಯಾರುಗೆ ಯಾವ ಹುದ್ದೆ?
1 ತನ್ವೀರ್ ಸೇಠ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ
2 ಬೇಲೂರು ಗೋಪಾಲಕೃಷ್ಣ ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ
3 ಮಂಜುನಾಥ ಭಂಡಾರಿ ವಿಧಾನಪರಿಷತ್‌ ಸರ್ಕಾರಿ ಮುಖ್ಯ ಸಚೇತಕ
4 ಬಿ. ಶಿವಣ್ಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷ
5 ಕೆ. ಷಡಕ್ಷರಿ ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷ
6 ಪಿ.ಎಂ. ಅಶೋಕ್ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷ
7 ಎ.ಆರ್. ಕೃಷ್ಣಮೂರ್ತಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಅಧ್ಯಕ್ಷ
8 ಹಂಪನಗೌಡ ಬಾದರ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ
9 ಡಿ.ಜಿ. ಶಾಂತನಗೌಡ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಅಧ್ಯಕ್ಷ
10 ಜಿ.ಎಚ್. ಶ್ರೀನಿವಾಸ್ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಅಧ್ಯಕ್ಷ
11 ಮಹಾಂತೇಶ ಕೌಜಲಗಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (KRDCL) ಅಧ್ಯಕ್ಷ
12 ಎಸ್‌.ಎನ್‌. ಸುಬ್ಬಾರೆಡ್ಡಿ ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್‌ ಲಿಮಿಟೆಡ್ (MSIL) ಅಧ್ಯಕ್ಷ
13 ಎನ್‌.ಎಚ್‌. ಕೋನರಡ್ಡಿ ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ
14 ಬಸನಗೌಡ ದದ್ದಲ್ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷ
15 ಅಲ್ಲಮಪ್ರಭು ಪಾಟೀಲ್ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (KSSIDC) ಅಧ್ಯಕ್ಷ
16 ಶ್ಯಾಮ್ ನಾಟೇಕರ್ ಕರ್ನಾಟಕ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ
17 ಎಚ್‌.ಸಿ. ಲಲಿತ್ ರಾಘವ್ ಕರ್ನಾಟಕ ವಿದ್ಯುತ್ ಕಾರ್ಖಾನೆ (KAVIKA) ಅಧ್ಯಕ್ಷ
18 ಸುಭಾಷ್ ರಾಠೋಡ್ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ

Related Articles

Back to top button