ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇಸೂರ್ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಸ್ಥಳೀಯ ಜನ ಪ್ರತಿನಿಧಿಗಳು ಚಾಲನೆಯನ್ನು ನೀಡಿದರು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಪ್ರಯತ್ನದಿಂದಾಗಿ ವಿವಿಧ ಕಾಮಗಾರಿಗಳು ಮಂಜೂರಾಗಿವೆ. ಶಾಸಕರು ಬೆಂಗಳೂರಿನಲ್ಲಿ ವಿಧಾನಸಭೆ ಅಧಿವೇಶನದಲ್ಲಿರುವುದರಿಂದ ಅವರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಕಾಮಗಾರಿಗೆ ಚಾಲನೆ ನೀಡಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅನುದಾನದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣ ಹಾಗೂ ಫೇವರ್ಸ್ ಅಳವಡಿಕೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅನುದಾನದಲ್ಲಿ ದೇಸೂರ್ ಗ್ರಾಮದಿಂದ ಯರಮಾಳ ಗ್ರಾಮದವರೆಗೆ ರಸ್ತೆಯ ಡಾಂಬರೀಕರಣದ ಕಾಮಗಾರಿ, ಸಣ್ಣ ನೀರಾವರಿ ಇಲಾಖೆಯ ಅನುದಾನದಲ್ಲಿ ಬ್ರಿಡ್ಜ್ ಕಂ ಬಾಂದಾರ್ ನಿರ್ಮಾಣದ ಕಾಮಗಾರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮಸ್ಥರು, ಯುವರಾಜ ಕದಂ, ಮೃಣಾಲ್ ಹೆಬ್ಬಾಳಕರ, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ