BusinessKarnataka NewsLatestPoliticsWorld

*ಜಪಾನ್ ನಲ್ಲಿ ಬುಲೆಟ್ ಟ್ರೇನ್ ನಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಬುಲೆಟ್ ಟ್ರೇನ್ ನಲ್ಲಿ ಪ್ರಯಾಣಿಸಿದ್ದಾರೆ.

ಜಪಾನ್ ಪ್ರವಾಸದಲ್ಲಿರುವ ಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಕ್ಕೆ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ಮಹತ್ವದ ಭೇಟಿಗಳನ್ನು ನಡೆಸುತ್ತಿದ್ದಾರೆ. ಈ ಪ್ರವಾಸದ ಭಾಗವಾಗಿ, ಸಿಎಂ ಡಿ.ಕೆ. ಶಿವಕುಮಾರ್ ಅವರು ಜಪಾನ್‌ನ ವಿಶ್ವಪ್ರಸಿದ್ಧ ಬುಲೆಟ್ ರೈಲಿನಲ್ಲಿ ಟೋಕಿಯೋದಿಂದ ನಗೋಯಾ ನಗರಕ್ಕೆ ಪ್ರಯಾಣಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಎಂ.ಬಿ. ಪಾಟೀಲ್ ಸೇರಿದಂತೆ ಉನ್ನತ ಮಟ್ಟದ ನಿಯೋಗವು ಮುಖ್ಯಮಂತ್ರಿಯವರೊಂದಿಗೆ ಇತ್ತು.

ನಗೋಯಾ ತಲುಪಿದ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಾಗತಿಕ ವಾಹನ ತಯಾರಿಕಾ ದಿಗ್ಗಜ ಟೊಯೋಟಾ ಕಂಪನಿಯ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯು ರಾಜ್ಯಕ್ಕೆ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯ ಸಾಧ್ಯತೆಗಳನ್ನು ಅನ್ವೇಷಿಸುವ ಗುರಿ ಹೊಂದಿದೆ. ಜಪಾನ್‌ನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಅವರ ನಿಯೋಗಕ್ಕೆ ಅದ್ದೂರಿ ಸ್ವಾಗತ ದೊರೆತಿದೆ.ಈ ಪ್ರವಾಸವು ಕರ್ನಾಟಕ ಮತ್ತು ಜಪಾನ್ ನಡುವಿನ ಆರ್ಥಿಕ ಹಾಗೂ ತಾಂತ್ರಿಕ ಸಹಕಾರವನ್ನು ಬಲಪಡಿಸುವ ನಿರೀಕ್ಷೆಯಿದೆ.

Related Articles

Back to top button