*ಬೆಳಗಾವಿ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಯಶೀಲ ಶೆಟ್ಟಿ ಅವಿರೋಧ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಯಶೀಲ ಶೆಟ್ಟಿ ಘಟಪ್ರಭಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಹಾಸಭೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷರು, ಹಿರಿಯರು ಹಾಗೂ ಗೌರವಾಧ್ಯಕ್ಷರಾದ ವಿಠಲ್ ಎಸ್. ಹೆಗ್ಡೆ, ನಿಕಟಪೂರ್ವ ಅಧ್ಯಕ್ಷ ವಿಜಯ್ ಎಂ. ಶೆಟ್ಟಿ, ಮಾಜಿ ಉಪಾಧ್ಯಕ್ಷರಾದ ಪ್ರಸನ್ನ ಕುಮಾರ್ ಶೆಟ್ಟಿ ಹಾಗೂ ಹಿಡ್ಕಲ್ ಕರುಣಾಕರ ಶೆಟ್ಟಿ, ಮಾಜಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಮಾಜಿ ಪ್ರಧಾನ ಕಾರ್ಯದರ್ಶಿ ಚೇತನ್ ಶೆಟ್ಟಿ, ಮಾಜಿ ಖಜಾಂಚಿ ಪ್ರಣಯ ಆರ್. ಶೆಟ್ಟಿ, ಮಾಜಿ ಸಂಘಟನಾ ಕಾರ್ಯದರ್ಶಿ ಪ್ರಭಾಕರ್ ಶೆಟ್ಟಿ ಉಪಸ್ಥಿತರಿದ್ದರು.
ಇದಲ್ಲದೆ, ಹಿರಿಯ ಸದಸ್ಯರಾದ ಬಾರ್ಕೂರು ನಡುಮನೆ ಜಯರಾಮ್ ಶೆಟ್ಟಿ, ಮಾಜಿ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಜೆ.ಎಂ. ಕರುಣಾಕರ ಶೆಟ್ಟಿ, ಯರಗಟ್ಟಿ ರತ್ನಾಕರ ಶೆಟ್ಟಿ, ಕಿಯೋನಿಕ್ಸ್ನ ಉದಯ್ ಶೆಟ್ಟಿ, ಗೋಪಿನಾಥ್ ವಿ. ಹೆಗ್ಡೆ, ಸುರೇಶ್ ವಿ. ಶೆಟ್ಟಿ, ಶ್ರೀಧರ್ ಶೆಟ್ಟಿ, ನ್ಯಾಯವಾದಿ ರವೀಂದ್ರ ಎನ್. ಶೆಟ್ಟಿ, ನ್ಯಾಯವಾದಿ ಪ್ರಭಾಕರ ಶೆಟ್ಟಿ ಸೇರಿದಂತೆ ಸಂಘದ ಹಿರಿಯ ಪದಾಧಿಕಾರಿಗಳು ಹಾಗೂ ಬೆಳಗಾವಿ ಜಿಲ್ಲೆಯ ಸರ್ವ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.
ನೂತನ ಪದಾಧಿಕಾರಿಗಳ ಆಯ್ಕೆಯ ಸಂದರ್ಭದಲ್ಲಿ ಸಂಘದ ಹಿರಿಯರು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿ, ಸಂಘದ ಮುಂದಿನ ಕಾರ್ಯಚಟುವಟಿಕೆಗಳು, ಸಮಾಜದ ಸಂಘಟನೆ ಮತ್ತು ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಯಲಿ ಎಂದು ಆಶಿಸಿದರು.




