*ಬೆಳಗಾವಿಯಲ್ಲಿ ಮಾರಕ ಚಾಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಮಾರ್ಕೆಟ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾನೂನುಬಾಹಿರವಾಗಿ ಹರಿತವಾದ ಚಾಕು ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬನನ್ನು ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ತಂಡ ಬಂಧಿಸಿದ್ದು, ಚಾಕುವನ್ನು ವಶಪಡಿಸಿಕೊಂಡಿದೆ.
ನ.23ರಂದು ನಗರದಲ್ಲಿ ನಡೆಯಬಹುದಾದ ಸರಗಳ್ಳತನ ಪ್ರಕರಣಗಳನ್ನು ತಡೆಗಟ್ಟುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮಾರ್ಕೆಟ್ ಪೊಲೀಸ್ ಠಾಣೆಯ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ತಂಡ ಮುಂಜಾಗ್ರತಾ ಕ್ರಮವಾಗಿ ಪರಿಶೀಲನೆ ನಡೆಸುತ್ತಿತ್ತು.
ಈ ವೇಳೆ ಹಣಮನ್ನವರ ಟ್ರೇಡರ್ಸ್ ಗೋಡೌನ್ ಗೇಟ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾಕರ ಗಲ್ಲಿಯ ಮಹಮ್ಮದಜಯಾ ಸಯ್ಯದ ಶೇಖ (26) ಎಂಬಾತನನ್ನು ಪರಿಶೀಲಿಸಿದಾಗ, ಆತನ ಬಳಿ ಹರಿತವಾದ ಚಾಕು ಪತ್ತೆಯಾಗಿದೆ. ಅಪರಾಧ ಕೃತ್ಯ ಎಸಗುವ ಉದ್ದೇಶದಿಂದ ಚಾಕು ಇಟ್ಟುಕೊಂಡಿದ್ದ ಆರೋಪದ ಮೇಲೆ ಆತನನ್ನು ಪೊಲೀಸರು ಬಂಧಿಸಿ ಚಾಕುವನ್ನು ವಶಪಡಿಸಿಕೊಂಡಿದ್ದಾರೆ.
ಮಾರ್ಕೆಟ್ ಠಾಣೆಯ ಪಿಎಸ್ಐ ಮಣಿಕಂಠ ಪೂಜಾರಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.




