EducationKarnataka NewsLatest

*ಈ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ*: *ಪರೀಕ್ಷಾ ಟೈಂ ಟೇಬಲ್ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಈ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ, ಪರೀಕ್ಷಾ ಟೈಂ ಟೇಬಲ್ ಪ್ರಕಟ

ಪ್ರಾಥಮಿಕ ಶಾಅಲಾ ಶಿಕ್ಷಕರಾಗುವ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಮಹತ್ವದ ಸುದ್ದಿ. 2026-27ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಲ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಗೆ ದಿನಾಅಂಕ ವಿಸ್ತರಿಸಲಾಗಿದೆ.

ಹಾವೇರಿ ಜಿಲ್ಲಾ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರವು ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಿದೆ. ಇದರ ಜೊತೆಗೆ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿಯನ್ನೂ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರು (1ರಿಂದ 5ನೇ ತರಗತಿ) ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-II (1ರಿಂದ 8ನೇ ತರಗತಿ) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಈ ಹಿಂದೆ 2026ರ ಆಗಸ್ಟ್ 11ರಂದು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅಭ್ಯರ್ಥಿಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿ ಸೇರ್ಪಡೆ ಅಧಿಸೂಚನೆ ಪ್ರಕಟಿಸಲಾಗಿದೆ.

2026ರ ನವೆಂಬರ್ 23ರಂದು ಪ್ರಕಟವಾದ ವಿಶೇಷ ರಾಜ್ಯಪತ್ರಿಕೆಯ (ಗೆಜೆಟ್) ಪ್ರಕಾರ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನವೆಂಬರ್ 23ರಿಂದ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 21, 2026 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಶುಲ್ಕ ಪಾವತಿಸಿರುವುದನ್ನು ಖಚಿತಪಡಿಸಿಕೊಳ್ಳಲು ಡಿಸೆಂಬರ್ 23ರವರೆಗೆ ಅವಕಾಶ ನೀಡಲಾಗಿದೆ.

ಪರಿಷ್ಕೃತ ಅರ್ಜಿ ಸಲ್ಲಿಕೆ ವೇಳಾಪಟ್ಟಿ:
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ: 23-11-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-12-2026
ಶುಲ್ಕ ಪಾವತಿ ಖಚಿತಪಡಿಸಿಕೊಳ್ಳಲು ಕೊನೆಯ ದಿನಾಂಕ: 23-12-2026
ಜನವರಿಯಲ್ಲಿ ನೇಮಕಾತಿ ಪರೀಕ್ಷೆ:
ಅರ್ಜಿ ಸಲ್ಲಿಕೆ ದಿನಾಂಕದ ಜೊತೆಗೆ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿಯನ್ನೂ ಪ್ರಾಧಿಕಾರ ಪ್ರಕಟಿಸಿದೆ. 2027ರ ಜನವರಿ 18 ಮತ್ತು 19ರಂದು ಪರೀಕ್ಷೆಗಳು ನಡೆಯಲಿದ್ದು, ಅಭ್ಯರ್ಥಿಗಳು ಪರೀಕ್ಷೆಯ ದಿನಾಂಕ ಮತ್ತು ಸಮಯವನ್ನು ಗಮನದಲ್ಲಿಟ್ಟುಕೊಂಡು ಸಿದ್ಧತೆ ಮಾಡಿಕೊಳ್ಳಬೇಕಿದೆ.

ಜನವರಿ 18, 2027 (ಸೋಮವಾರ):

ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ: ಪತ್ರಿಕೆ-1 (ಸಾಮಾನ್ಯ)
ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ: ಪತ್ರಿಕೆ-2 (ಗಣಿತ, ಪರಿಸರ ಅಧ್ಯಯನ, ಸಮಾಜ ವಿಜ್ಞಾನ)
ಜನವರಿ 19, 2027 (ಮಂಗಳವಾರ):

ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ: ಪತ್ರಿಕೆ-2 (ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-II)
ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ:
ಹಾವೇರಿ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರದ ಅಧಿಕಾರಿಗಳು ಈ ಸೇರ್ಪಡೆ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ನೇಮಕಾತಿಗೆ ಅರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ವಿಸ್ತರಿತ ಅರ್ಜಿ ಸಲ್ಲಿಕೆ ಅವಧಿಯ ಸದುಪಯೋಗ ಪಡೆದುಕೊಳ್ಳಬೇಕು. ಕೊನೆಯ ಕ್ಷಣದವರೆಗೆ ಕಾಯದೆ ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

Related Articles

Back to top button