Karnataka NewsLatestPolitics

*ಕ್ಯಾನ್ಸರ್‌ ವಿರುದ್ಧ ಹೋರಾಡುತ್ತಿರುವ ಬಾಲಕಿಗೆ ಜಪಾನ್‌ನಿಂದಲೇ ಕರೆ ಮಾಡಿ ಧೈರ್ಯ ತುಂಬಿದ ಸಿಎಂ ಡಿ.ಕೆ. ಶಿವಕುಮಾರ್‌*

ಪ್ರಗತಿವಾಹಿನಿ ಸುದ್ದಿ: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ 5ನೇ ತರಗತಿಯ ವಿದ್ಯಾರ್ಥಿನಿ ಯೋಗಿತಾ ಕ್ಯಾನ್ಸರ್‌ನಿಂದ ಬಳಲುತ್ತಿರುವ ವಿಷಯ ತಿಳಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಜಪಾನ್‌ ಪ್ರವಾಸದಲ್ಲಿದ್ದಾಗಲೇ ವಿಡಿಯೋ ಕರೆ ಮೂಲಕ ಬಾಲಕಿ ಹಾಗೂ ಆಕೆಯ ಪೋಷಕರೊಂದಿಗೆ ಮಾತನಾಡಿ ಧೈರ್ಯ ತುಂಬಿದರು.

ಈ ವೇಳೆ ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಜಗತ್ತಿನಲ್ಲಿ ಅಸಾಧ್ಯವಾದದ್ದು ಯಾವುದೂ ಇಲ್ಲ. ಈ ಕಷ್ಟದ ಸಮಯದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ. ಎಲ್ಲವೂ ಒಳ್ಳೆಯದಾಗಲಿದೆ, ಭಗವಂತ ಇದ್ದಾನೆ ಎಂದು ಸಾಂತ್ವನ ಹೇಳಿದರು.

ಜೊತೆಗೆ ತಮ್ಮನ್ನು ಭೇಟಿಯಾಗಬೇಕೆಂಬ ಯೋಗಿತಾಳ ಆಸೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಜಪಾನ್‌ ಪ್ರವಾಸದಿಂದ ಮರಳಿ ಬಂದ ಬಳಿಕ ತಪ್ಪದೇ ಭೇಟಿ ಮಾಡುವುದಾಗಿ ಭರವಸೆಯನ್ನು ನೀಡಿದರು.

Related Articles

Back to top button