Belagavi NewsBelgaum NewsCrimeKannada NewsKarnataka News

*ಮೂಡಲಗಿ–ಗುರ್ಲಾಪುರ ರಸ್ತೆಯಲ್ಲಿ ಭೀಕರ ಅಪಘಾತ*: *ಆರೋಗ್ಯ ಸಿಬ್ಬಂದಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾರು ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಯಾಲಿಸಿಸ್ ವಾರ್ಡ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ಮೂಡಲಗಿ–ಗುರ್ಲಾಪುರ ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಅಥಣಿ ತಾಲೂಕಿನ ಕೊಕಟನೂರು ಗ್ರಾಮದ ಮುರಗೇಶ ಮಂಟೂರ (32) ಎಂದು ಗುರುತಿಸಲಾಗಿದೆ. ಇವರು ಮೂಡಲಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ವಿಭಾಗದಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮುರಗೇಶ ಅವರು ಬುಧವಾರ ಮುಂಜಾನೆ ತಮ್ಮ ಕರ್ತವ್ಯಕ್ಕೆ ಹಾಜರಾಗಲು ಕೊಕಟನೂರು ಗ್ರಾಮದಿಂದ ಕಾರಿನಲ್ಲಿ ಮೂಡಲಗಿಗೆ ಆಗಮಿಸುತ್ತಿದ್ದ ವೇಳೆ, ಮೂಡಲಗಿ–ಗುರ್ಲಾಪೂರ ರಸ್ತೆಯಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು, ತೀವ್ರವಾಗಿ ಗಾಯಗೊಂಡ ಮುರಗೇಶ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಕುಟುಂಬಸ್ಥರು ಹಾಗೂ ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದಲ್ಲಿಯೂ ಶೋಕದ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related Articles

Back to top button